ಮೈಸೂರು

ಓದುಗರ ಪತ್ರ | ರಾಜಕಾಲುವೆಗೆ ಕೊಳಚೆ ನೀರು ಸೇರುವುದನ್ನು ತಪ್ಪಿಸಿ

ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯಲ್ಲಿರುವ ಜೆ. ಸಿ. ಲೇಔಟ್‌ನ ೮ನೇ ಕ್ರಾಸ್ ಬಳಿ ರಾಜಕಾಲುವೆ ಇದೆ. ಇದಕ್ಕೆ ಸಮೀಪದಲ್ಲಿ ಇರುವ ಕೆ. ಸಿ. ಲೇಔಟ್ ಕಡೆಯಿಂದ ಹರಿದುಬರುವ ಕೊಳಚೆ ನೀರು ಸೇರ್ಪಡೆಯಾಗುತ್ತಿದ್ದು, ದುರ್ನಾತ ಬೀರುತ್ತಿದೆ. ಹಾಗಾಗಿ ರಾಜಕಾಲುವೆ ಆಸುಪಾಸಿನಲ್ಲಿ ವಾಸಿಸುತ್ತಿರುವ ನಿವಾಸಿಗಳು ಇದರಿಂದ ಪರದಾಡುವಂತೆ ಆಗಿದೆ. ಅಲ್ಲದೆ, ಕೊಳಚೆಯಿಂದಾಗಿ ಈ ಜಾಗವು ಸೊಳ್ಳೆಗಳ ಆವಾಸ್ಥಾನವಾಗಿಬಿಟ್ಟಿದೆ. ಇದರಿಂದ ಸ್ಥಳೀಯರು ರೋಗ-ರುಜಿನಗಳು ಹರಡುವ ಭೀತಿಯಲ್ಲಿ ದಿನದೂಡುವಂತಾಗಿದೆ. ಈ ಸಮಸ್ಯೆಯನ್ನು ಜನಪ್ರತಿನಿಽಗಳು, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರೂ ರಾಜಕಾಲುವೆಗೆ ಸೇರುತ್ತಿರುವ ಕೊಳಚೆ ನೀರನ್ನು ಬೇರೆ ಕಡೆಗೆ ಹರಿಯುವಂತೆ ಮಾಡಲು ಕ್ರಮವಹಿಸುವ ಮೂಲಕ ಸ್ಥಳೀಯರು ನೆಮ್ಮದಿಯಾಗಿರಲು ಅವಕಾಶ ಕಲ್ಪಿಸಿಕೊಡಬೇಕು.

-ಕಾಂತರಾಜು, ಜೆ. ಸಿ. ಲೇಔಟ್, ಮೈಸೂರು

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

3 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

4 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

4 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

4 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

4 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

5 hours ago