Andolana originals

ಓದುಗರ ಪತ್ರ: ಅನಗತ್ಯ ಫೋನ್ ಕರೆಗಳ ಕಿರಿಕಿರಿ ತಪ್ಪಿಸಿ

ಇತ್ತೀಚಿನ ದಿನಗಳಲ್ಲಿ ಅನಗತ್ಯ ದೂರವಾಣಿ ಕರೆಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ ಕರೆಮಾಡುವ ಕೆಲವು ಖಾಸಗಿ ಕಾಲೇಜು ಹಾಗೂ ಕಂಪ್ಯೂಟರ್ ಸೆಂಟರ್‌ಗಳವರು ನಿಮ್ಮ ಮಗ,ಮಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಪಾಸ್ ಆಗಿದ್ದಾರಾ? ಹಾಗಿದ್ದರೆ ನಮ್ಮ ಕಾಲೇಜಿಗೆ, ಕಂಪ್ಯೂಟರ್ ಸೆಂಟರ್‌ಗೆ ಸೇರಿಸಿ ಎಂದು ಹೇಳುತ್ತಾರೆ.

ನಿಮಗೆ ನಮ್ಮ ಫೋನ್ ನಂಬರ್ ಕೊಟ್ಟವರು ಯಾರು ಎಂದು ಕೇಳಿದರೆ ಬೋರ್ಡ್‌ನಿಂದ ಪಡೆಯಲಾಗಿದೆ ಎಂದು ಹೇಳುತ್ತಾರೆ. ಪ್ರತಿಯೊಬ್ಬರ ಮೊಬೈಲ್ ನಂಬರ್ ಖಾಸಗಿಯಾಗಿರುತ್ತದೆ. ಪೋಷಕರ ಅನುಮತಿ ಇಲ್ಲದೇ ಪರೀಕ್ಷಾ ಮಂಡಳಿಯವರು ಹೇಗೆ ಖಾಸಗಿ ಕಾಲೇಜು ಹಾಗೂ ಕಂಪ್ಯೂಟರ್ ಸೆಂಟರ್‌ಗಳಿಗೆ ಮೊಬೈಲ್ ನಂಬರ್ ನೀಡುತ್ತಾರೆ? ಪೋಷಕರ ಮೊಬೈಲ್ ನಂಬರ್ ಪಡೆಯಲು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಹಣ ಸಂದಾಯವಾಗುತ್ತದೆಯೇ ಎಂಬ ಅನುಮಾನ ಮೂಡುತ್ತದೆ.

ಸರ್ಕಾರ ಹಾಗೂ ಶಿಕ್ಷಣ ಇಲಾಖೆಯವರು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಸಂಖ್ಯೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಕಂಪ್ಯೂಟರ್‌ಸೆಂಟರ್‌ಗಳಿಗೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಪೋಷಕರಿಗೆ ಅನಗತ್ಯ ಕರೆಗಳಿಂದ ಆಗುತ್ತಿರುವ ಕಿರಿಕಿರಿಯನ್ನು ತಪ್ಪಿಸಬೇಕಾಗಿದೆ.

– ಮೀನಾಕ್ಷಿ, ಮೈಸೂರು

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago