Mysore
25
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಓದುಗರ ಪತ್ರ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಅಪಾರ್ಥ ಸೃಷ್ಟಿ

ಓದುಗರ ಪತ್ರ

ಆರ್‌ಎಸ್‌ಎಸ್ ಚಟುವಟಿಕೆಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ವ್ಯಕ್ತಿಗತವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದಲ್ಲದೆ, ನಿಮ್ಮನ್ನು ಕೊಲ್ಲುತ್ತೇವೆ ಎಂದು ಜೀವ ಬೆದರಿಕೆ ಹಾಕುತ್ತಿರುವುದು ಕಾನೂನು ಬಾಹಿರ ಕೃತ್ಯವಾಗಿದೆ. ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧ ಪಟ್ಟ ಯಾವುದೇ ರೀತಿಯ ಕಾರ್ಯಕ್ರಮಗಳು ಹಾಗೂ ಕಾರ್ಯಾಗಾರ ಆಯೋಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂಬು ದಾಗಿ ಅಷ್ಟೇ ತಾವು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾಗಿ ಖರ್ಗೆ ಹೇಳಿಕೊಂಡಿದ್ದಾರೆ .

ಈ ಹೇಳಿಕೆಗೆ ಸ್ಪಷ್ಟೀಕರಣವನ್ನೂ ನೀಡಿದ್ದಾರೆ. ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳದ ಸಂಘ ಪರಿವಾರದ ಕೆಲವು ಮನಸ್ಸುಗಳು ಸಂಘಟನೆಯನ್ನು ನಿಷೇಧ ಮಾಡಿ ಎಂದು ಹೇಳಿದ್ದಾರೆ ಎಂಬ ಸುಳ್ಳನ್ನು ಜನರಲ್ಲಿ ಬಿತ್ತುತ್ತಿರುವುದು ಸರಿಯಲ್ಲ. ಒಂದು ವೇಳೆ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ನಿಷೇಧ ಕುರಿತು ಹೇಳಿಕೆ ನೀಡಿದ್ದರೆ, ಕಾನೂನಾತ್ಮಕ ಹೋರಾಟ ಮಾಡಲು ನಮ್ಮ ಸಂವಿಧಾನ ನಿಮಗೆ ಅವಕಾಶ ನೀಡಿದೆ. ಆದರೆ ಈ ಮಾರ್ಗವನ್ನು ಬಿಟ್ಟು ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಮೊಬೈಲ್ ಕರೆಗಳ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಿಗೆ ಇಳಿಯುವುದು ಸರ್ವನಾಶದ ಸಮೀಪ ಸುಳಿ ದಂತಾಗಲಿದೆ.

-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ

Tags:
error: Content is protected !!