ಓದುಗರ ಪತ್ರ
ಆರ್‌ಎಸ್‌ಎಸ್ ಚಟುವಟಿಕೆಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಿ ಎಂದು ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ವ್ಯಕ್ತಿಗತವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದಲ್ಲದೆ, ನಿಮ್ಮನ್ನು ಕೊಲ್ಲುತ್ತೇವೆ ಎಂದು ಜೀವ ಬೆದರಿಕೆ ಹಾಕುತ್ತಿರುವುದು ಕಾನೂನು ಬಾಹಿರ ಕೃತ್ಯವಾಗಿದೆ. ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧ ಪಟ್ಟ ಯಾವುದೇ ರೀತಿಯ ಕಾರ್ಯಕ್ರಮಗಳು ಹಾಗೂ ಕಾರ್ಯಾಗಾರ ಆಯೋಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂಬು ದಾಗಿ ಅಷ್ಟೇ ತಾವು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾಗಿ ಖರ್ಗೆ ಹೇಳಿಕೊಂಡಿದ್ದಾರೆ .
ಈ ಹೇಳಿಕೆಗೆ ಸ್ಪಷ್ಟೀಕರಣವನ್ನೂ ನೀಡಿದ್ದಾರೆ. ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳದ ಸಂಘ ಪರಿವಾರದ ಕೆಲವು ಮನಸ್ಸುಗಳು ಸಂಘಟನೆಯನ್ನು ನಿಷೇಧ ಮಾಡಿ ಎಂದು ಹೇಳಿದ್ದಾರೆ ಎಂಬ ಸುಳ್ಳನ್ನು ಜನರಲ್ಲಿ ಬಿತ್ತುತ್ತಿರುವುದು ಸರಿಯಲ್ಲ. ಒಂದು ವೇಳೆ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ನಿಷೇಧ ಕುರಿತು ಹೇಳಿಕೆ ನೀಡಿದ್ದರೆ, ಕಾನೂನಾತ್ಮಕ ಹೋರಾಟ ಮಾಡಲು ನಮ್ಮ ಸಂವಿಧಾನ ನಿಮಗೆ ಅವಕಾಶ ನೀಡಿದೆ. ಆದರೆ ಈ ಮಾರ್ಗವನ್ನು ಬಿಟ್ಟು ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಮೊಬೈಲ್ ಕರೆಗಳ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಿಗೆ ಇಳಿಯುವುದು ಸರ್ವನಾಶದ ಸಮೀಪ ಸುಳಿ ದಂತಾಗಲಿದೆ.
-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…
ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…