ರಾಜ್ಯ ಸರ್ಕಾರ ಸೆಪ್ಟೆಂಬರ್ ೧ರಿಂದ ಸ್ಥಿರಾಸ್ತಿ ನೋಂದಣಿ ಶುಲ್ಕವನ್ನು ಶೇ.೨ ರಷ್ಟು ಹೆಚ್ಚಳ ಮಾಡಿರುವುದು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಮತ್ತೊಂದು ಆರ್ಥಿಕ ಹೊಡೆತ ನೀಡಿದೆ. ೧೦ ಲಕ್ಷ ರೂ. ಮೌಲ್ಯದ ನಿವೇಶನ ಅಥವಾ ಮನೆಯನ್ನು ಖರೀದಿಸಿ, ಅದನ್ನು ರಿಜಿಸ್ಟರ್ ಮಾಡಿಸಿಕೊಳ್ಳಲು ೭೬ ಸಾವಿರ ರೂಪಾಯಿಗಳನ್ನು ನೋಂದಣಿ ಶುಲ್ಕವಾಗಿಯೇ ಪಾವತಿಸಬೇಕು.
ಅಲ್ಲದೇ ಇತರ ಖರ್ಚುಗಳು ಸೇರಿದಂತೆ ಸುಮಾರು ಒಂದು ಲಕ್ಷ ರೂ.ಗಳಿಗೂ ಹೆಚ್ಚು ಖರ್ಚಾಗುತ್ತದೆ. ಕಳೆದ ಎರಡು ವರ್ಷಗಳ
ಹಿಂದೆ ಕೇವಲ ಶೇ.೫ ರಷ್ಟು ಇದ್ದ ನೋಂದಣಿ ಶುಲ್ಕವನ್ನು ಸರ್ಕಾರ ಕಳೆದ ಎರಡು ವರ್ಷಗಳಲ್ಲಿ ಎರಡು ಬಾರಿ ಏರಿಕೆ ಮಾಡಿದೆ. ಸರ್ಕಾರ ಆಸ್ತಿ ನೋಂದಣಿ ಶುಲ್ಕವನ್ನು ಕಡಿಮೆ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು





