ಇತ್ತೀಚೆಗೆ ರಾಜ್ಯದಲ್ಲಿ ಮಾದಕ ದ್ರವ್ಯ ಬಳಕೆ ಮತ್ತು ಮಾರಾಟದಲ್ಲಿ ಮಕ್ಕಳು ಪಾಲ್ಗೊಳ್ಳುವಿಕೆಯ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ೨೦೨೧ರಲ್ಲಿ ೫೨ ಮಕ್ಕಳನ್ನು ಮಾದಕ ದ್ರವ್ಯ ಪ್ರಕರಣಗಳಲ್ಲಿ ಬಂಧಿಸಲಾಗಿದ್ದರೆ, ೨೦೨೩ರ ವೇಳೆಗೆ ಈ ಸಂಖ್ಯೆ ೯೨ಕ್ಕೆ ಏರಿದೆ ಮತ್ತು ೨೦೨೪ರಲ್ಲಿ ಇದು ೧೨೦ಕ್ಕಿಂತ ಹೆಚ್ಚು.
ಮಾದಕ ವಸ್ತುಗಳ ಮಾರಾಟದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮಕ್ಕಳ ಭವಿಷ್ಯವನ್ನು ರಕ್ಷಿಸಬೇಕಾಗಿದೆ.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು





