ಓದುಗರ ಪತ್ರ
ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ, ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಸೆಂಟ್ರಿಂಗ್ ಮತ್ತಿತರ ಕಾರ್ಯ ಗಳಿಗಾಗಿ ಕಬ್ಬಿಣದ ಸರಳುಗಳನ್ನು ಕಟ್ಟಿ ಅಣಿಗೊಳಿಸುವವರು (ಬಾರ್ ಬೆಂಡರ್), ಮರಗೆಲಸ, ಟೈಲ್ಸ್ ಅಳವಡಿಸುವುದು ಮೊದಲಾದ ವೃತ್ತಗಳಲ್ಲಿ ತೊಡಗಿರುವ ಕಾರ್ಮಿಕರು ಉದ್ಯೋಗದ ಸ್ಥಳದಲ್ಲಿ ಆಕಸ್ಮಿಕವಾಗಿ ಮೃತಪಟ್ಟರೆ ಹಾಗೂ ಅಂಗವಿಕಲರಾದರೆ ಅವರಿಗೆ ಜೀವನಕ್ಕೆ ಭದ್ರತೆಯಿಲ್ಲದೇ ಅವರ ಕುಟುಂಬದವರು ಬೀದಿ ಪಾಲಾಗಬೇಕಾಗುತ್ತದೆ.
ಕಾರ್ಪೊರೇಟ್ ಕಂಪೆನಿಗಳ ಮಾದರಿಯಲ್ಲಿ ಅವರಿಗೆ ವಾರದ ರಜೆ, ಪಿಎ-, ಇಎಸ್‌ಐ ಮೊದಲಾದ ಯಾವುದೇ ಸೌಲಭ್ಯವಿರುವುದಿಲ್ಲ. ಕೆಲಸಕ್ಕೆ ಬಂದ ದಿನ ಮಾತ್ರ ಕೂಲಿ ಹಣ ಸಂದಾಯವಾಗುತ್ತದೆ. ಅನಾರೋಗ್ಯದಿಂದ ಅಥವಾ ಅನಿವಾರ್ಯ ಕಾರಣದಿಂದ ಕೆಲಸಕ್ಕೆ ಹೋಗದಿದ್ದರೆ ಅಂದಿನ ಕೂಲಿ ಸಿಗುವುದಿಲ್ಲ. ನೂರಾರು ಜನರಿಗೆ ಮನೆ ನಿರ್ಮಿಸಿಕೊಡುವ ಇವರಿಗೆ ಸ್ವಂತ ಮನೆಯೂ ಇರುವುದಿಲ್ಲ. ಕಾರ್ಮಿಕ ಇಲಾಖೆಯಿಂದ ಅಸಂಘಟಿತ ಕಾರ್ಮಿಕರಿಗಾಗಿ ಲೇಬರ್ ಕಾರ್ಡ್‌ಗಳನ್ನು ವಿತರಿಸಲಾಗುತ್ತಿದ್ದು, ಕೆಲವು ಸೌಲಭ್ಯಗಳನ್ನು ಕಲ್ಪಿಸಿದ್ದರೂ ಮಾಹಿತಿಯ ಕೊರತೆಯಿಂದ ಬಹುತೇಕ ಕಾರ್ಮಿಕರು ಲೇಬರ್ ಕಾರ್ಡ್ಗಳನ್ನು ಪಡೆದಿರುವುದಿಲ್ಲ.
ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಕೂಡಲೇ ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ ಸ್ಥಳದಲ್ಲಿ ಭದ್ರತೆ ಒದಗಿಸಬೇಕು ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಆಕಸ್ಮಿಕವಾಗಿ ಕಾರ್ಮಿಕರು ಮೃತಪಟ್ಟರೆ ಅಥವಾ ಅಂಗವಿಕಲರಾದರೆ ಅವರ ಕುಟುಂಬದವರಿಗೆ ಸೂಕ್ತ ಆರ್ಥಿಕ ನೆರವು, ಪಿಂಚಣಿ ಮೊದಲಾದ ಸೌಲಭ್ಯಗಳನ್ನು ಕಲ್ಪಿಸಿದರೆ ಮೇ ೧ರಂದು ಆಚರಿಸಲಾಗುವ ಕಾರ್ಮಿಕ ದಿನಾಚರಣೆಗೆ ಅರ್ಥ ಬರುತ್ತದೆ.
-ಅಹಲ್ಯ ಸಿ.ನಾ. ಚಂದ್ರ, ಜನತಾ ನಗರ, ಮೈಸೂರು
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…