Mysore
25
scattered clouds

Social Media

ಸೋಮವಾರ, 26 ಜನವರಿ 2026
Light
Dark

ಓದುಗರ ಪತ್ರ: ಹೆಚ್ಚುವರಿ ಬಸ್‌ಗಳ ಸಂಚಾರ ಕಲ್ಪಿಸಿ

ಓದುಗರ ಪತ್ರ

ಪ್ರತಿನಿತ್ಯ ನಂಜನಗೂಡು – ಗುಂಡ್ಲುಪೇಟೆ ಮಾರ್ಗದಲ್ಲಿ ನೂರಾರು ಜನರು ಸಾರಿಗೆ ಬಸ್‌ಗಳಲ್ಲಿ ಸಂಚರಿಸುತ್ತಾರೆ. ಇವರಲ್ಲಿ ಮುಖ್ಯವಾಗಿ ಉದ್ಯೋಗಿಗಳೇ ಹೆಚ್ಚಾಗಿದ್ದಾರೆ. ಆದರೆ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಎಲ್ಲ ಬಸ್‌ಗಳು ತುಂಬಿ ತುಳುಕುತ್ತಿರುತ್ತವೆ. ನಿಲ್ಲುವುದಕ್ಕೂ ಜಾಗವಿಲ್ಲದಷ್ಟು ಪ್ರಯಾಣಿಕರು ಇರುತ್ತಾರೆ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿ ಸುವುದೇ ದುಸ್ತರವಾಗಿದೆ.

ಸಂಜೆ ಕೆಲಸ ಮುಗಿಸಿ ನಂಜನಗೂಡಿನಿಂದ ಗುಂಡ್ಲುಪೇಟೆ ಕಡೆಗೆ ಪ್ರಯಾಣಿಸುವವರ ಪಾಡು ಹೇಳತೀರದಾಗಿದೆ. ಹುಲ್ಲಹಳ್ಳಿ ಸರ್ಕಲ್‌ನಲ್ಲಿ ಸಂಜೆ ೪ ರಿಂದ ರಾತ್ರಿ ೮ ಗಂಟೆಯತನಕ ನೂರಾರು ಜನರು ಬಸ್‌ಗಾಗಿ ಕಾಯುತ್ತಾರೆ. ಮೈಸೂರಿನಿಂದ ಗುಂಡ್ಲುಪೇಟೆಗೆ ಸಂಚರಿಸುವ ಎಕ್ಸ್‌ಪ್ರೆಸ್ ಬಸ್‌ಗಳು ನಂಜನಗೂಡಿನಲ್ಲಿ ನಿಲ್ಲಿಸುವುದಿಲ್ಲ. ಈ ಸಮಯದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದಿರುವುದು ಪ್ರಯಾಣಿಕರ ಪರದಾಟಕ್ಕೆ ಕಾರಣವಾಗಿದೆ.

ಕೆಲವು ಬಸ್‌ಗಳಲ್ಲಿ ನಿಲ್ಲಲು ಜಾಗವಿಲ್ಲದಿದ್ದರೂ ಕೆಲವರು ಬಸ್ ಹತ್ತಲು ಹೋಗಿ ಕೆಳಗೆ ಬಿದ್ದು ಗಾಯಗೊಂಡಿರುವ ಅನೇಕ ಉದಾಹರಣೆಗಳಿವೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಜೆ ವೇಳೆಯಲ್ಲಿ ಈ ಮಾರ್ಗದಲ್ಲಿ ಹೆಚ್ಚಿನ ಬಸ್‌ಗಳ ವ್ಯವಸ್ಥೆ ಕಲ್ಪಿಸುವ ಮೂಲಕ ಪ್ರಯಾಣಿಕರ ಹಿತ ಕಾಪಾಡಬೇಕು.

-ಪವನ್, ಗುಂಡ್ಲುಪೇಟೆ

Tags:
error: Content is protected !!