ಓದುಗರ ಪತ್ರ
ಪ್ರತಿನಿತ್ಯ ನಂಜನಗೂಡು – ಗುಂಡ್ಲುಪೇಟೆ ಮಾರ್ಗದಲ್ಲಿ ನೂರಾರು ಜನರು ಸಾರಿಗೆ ಬಸ್‌ಗಳಲ್ಲಿ ಸಂಚರಿಸುತ್ತಾರೆ. ಇವರಲ್ಲಿ ಮುಖ್ಯವಾಗಿ ಉದ್ಯೋಗಿಗಳೇ ಹೆಚ್ಚಾಗಿದ್ದಾರೆ. ಆದರೆ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಎಲ್ಲ ಬಸ್‌ಗಳು ತುಂಬಿ ತುಳುಕುತ್ತಿರುತ್ತವೆ. ನಿಲ್ಲುವುದಕ್ಕೂ ಜಾಗವಿಲ್ಲದಷ್ಟು ಪ್ರಯಾಣಿಕರು ಇರುತ್ತಾರೆ. ಹೀಗಾಗಿ ಈ ಮಾರ್ಗದಲ್ಲಿ ಪ್ರಯಾಣಿ ಸುವುದೇ ದುಸ್ತರವಾಗಿದೆ.
ಸಂಜೆ ಕೆಲಸ ಮುಗಿಸಿ ನಂಜನಗೂಡಿನಿಂದ ಗುಂಡ್ಲುಪೇಟೆ ಕಡೆಗೆ ಪ್ರಯಾಣಿಸುವವರ ಪಾಡು ಹೇಳತೀರದಾಗಿದೆ. ಹುಲ್ಲಹಳ್ಳಿ ಸರ್ಕಲ್‌ನಲ್ಲಿ ಸಂಜೆ ೪ ರಿಂದ ರಾತ್ರಿ ೮ ಗಂಟೆಯತನಕ ನೂರಾರು ಜನರು ಬಸ್‌ಗಾಗಿ ಕಾಯುತ್ತಾರೆ. ಮೈಸೂರಿನಿಂದ ಗುಂಡ್ಲುಪೇಟೆಗೆ ಸಂಚರಿಸುವ ಎಕ್ಸ್‌ಪ್ರೆಸ್ ಬಸ್‌ಗಳು ನಂಜನಗೂಡಿನಲ್ಲಿ ನಿಲ್ಲಿಸುವುದಿಲ್ಲ. ಈ ಸಮಯದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದಿರುವುದು ಪ್ರಯಾಣಿಕರ ಪರದಾಟಕ್ಕೆ ಕಾರಣವಾಗಿದೆ.
ಕೆಲವು ಬಸ್‌ಗಳಲ್ಲಿ ನಿಲ್ಲಲು ಜಾಗವಿಲ್ಲದಿದ್ದರೂ ಕೆಲವರು ಬಸ್ ಹತ್ತಲು ಹೋಗಿ ಕೆಳಗೆ ಬಿದ್ದು ಗಾಯಗೊಂಡಿರುವ ಅನೇಕ ಉದಾಹರಣೆಗಳಿವೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಜೆ ವೇಳೆಯಲ್ಲಿ ಈ ಮಾರ್ಗದಲ್ಲಿ ಹೆಚ್ಚಿನ ಬಸ್‌ಗಳ ವ್ಯವಸ್ಥೆ ಕಲ್ಪಿಸುವ ಮೂಲಕ ಪ್ರಯಾಣಿಕರ ಹಿತ ಕಾಪಾಡಬೇಕು.
-ಪವನ್, ಗುಂಡ್ಲುಪೇಟೆ
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…