Andolana originals

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ರೋಗಿಗಳು ಪರದಾಡುವಂತಾಗಿದೆ.  ವಿಧಾನಪರಿಷತ್ ಮಾಜಿ ಸದಸ್ಯ ಗೋ.  ಮಧುಸೂದನ್ ಅವರು ನೀಡಿರುವ ಮಿನಿ ಆಂಬ್ಯುಲೆನ್ಸ್ ಗೆ ಚಾಲಕರ ಕೊರತೆಯಿಂದಾಗಿ ಹಗಲು ವೇಳೆ ಮಾತ್ರ ಸೇವೆಯನ್ನು ಒದಗಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳ ಆಂಬ್ಯುಲೆನ್ಸ್‌ಗಳಿಗೆ ಪ್ರತಿ ಕಿಲೋ ಮೀಟರ್‌ಗೆ ದರ ನಿಗದಿಪಡಿಸಲಾಗಿದ್ದು, ತಾಲ್ಲೂಕಿನ ಬಡ ಜನರಿಗೆ ದುಬಾರಿ ಹಣ   ಪಾವತಿಸಲು ಕಷ್ಟವಾಗುತ್ತಿದೆ. ಶಾಸಕರು, ಸಂಸದರು ಹಾಗೂ ಗ್ರಾಮಪಂಚಾಯಿತಿ ಅಧಿಕಾರಿಗಳು ಕೂಡಲೇ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೂಡಲೇ ಆಂಬ್ಯುಲೆನ್ಸ್ ಸೌಲಭ್ಯವನ್ನು ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ 

 

ಆಂದೋಲನ ಡೆಸ್ಕ್

Recent Posts

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…

1 hour ago

ಹಾಲಿ-ಮಾಜಿ ಶಾಸಕರಿಗೆ ಕ್ಷೇತ್ರ ಪುನರ್‌ವಿಂಗಡಣೆ ಗುಮ್ಮ!

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…

1 hour ago

150 ವರ್ಷಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲೆ!

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…

1 hour ago

ಸರಸ್ವತಿಪುರಂ ಕಲ್ಯಾಣಿಗೆ ಪುನಶ್ಚೇತನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…

1 hour ago

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ   ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…

2 hours ago