ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟಿನ ಆದೇಶವು ಕಾರಣವಾಗಿದೆ, ನಿಜ. ಆದರೆ ತೆರವಿಗೆ ಮುನ್ನ ಇಂತಹ ವ್ಯಾಪಾರಿಗಳಿಗೆ ಬದಲಿ ಶಾಶ್ವತ ವ್ಯವಸ್ಥೆ ಕಲ್ಪಿಸುವುದು ಸ್ಥಳೀಯ ಆಡಳಿತದ ಕರ್ತವ್ಯ. ಇಲ್ಲಿ ಮಾನವೀಯತೆಯೂ ಇರಬೇಕಾಗುತ್ತದೆ.
ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಫುಟ್ ಪಾತ್ ವ್ಯಾಪಾರಿಗಳ ತೆರವು ಕಾರ್ಯಾಚರಣೆ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಇತ್ತೀಚೆಗೆ ಮೈಸೂರಿನಲ್ಲಿ ಇದು ನಡೆಯುತ್ತಿದೆ. ಪಾದಚಾರಿಗಳ ಹಿತದೃಷ್ಟಿಯಿಂದ ಈ ಕಾರ್ಯಸ್ತುತ್ಯಾರ್ಹ. ಇದು ಕೇವಲ ಬೆಂಗಳೂರು, ಮೈಸೂರಿನ ಸಮಸ್ಯೆಯಲ್ಲ. ರಾಜ್ಯದ ನಾನಾ ಕಡೆ ಫುಟ್‌ಪಾತ್ ವ್ಯಾಪಾರಿಗಳನ್ನು ಕಾಣಬಹುದಾಗಿದೆ. ಈ ಸಮಸ್ಯೆ ಮರುಕಳಿಸಬಾರದೆಂದರೆ ಫುಟ್‌ಪಾತ್ ವ್ಯಾಪಾರಿಗಳಿಗೆ ಸೂಕ್ತ ಕಡೆ ಶಾಶ್ವತ ವ್ಯವಸ್ಥೆ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ಸ್ವಲ್ಪ ದಿನಗಳ ನಂತರ ಮತ್ತೆ ಹಿಂದಿನ ಜಾಗದಲ್ಲೇ ವ್ಯಾಪಾರ ಚಟುವಟಿಕೆ ನಡೆಯುವುದನ್ನು ಕಾಣಬಹುದು. ಹಾಗಾಗಿ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಪಾದಚಾರಿಗಳ ರಸ್ತೆ ಅತಿಕ್ರಮಣವಾಗದಂತೆ ನೋಡಿಕೊಳ್ಳಬೇಕು. ಹಾಗೆಯೇ ಫುಟ್‌ಪಾತ್ ವ್ಯಾಪಾರಿಗಳು ನೆಮ್ಮದಿಯ ಜೀವನ ನಡೆಸುವಂತಾಗಬೇಕು.
-ಎ.ಎಸ್.ಗೋಪಾಲಕೃಷ್ಣ, ಮೈಸೂರು
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…