ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್ ಹಾಗೂ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಈವರೆಗೂ ಸಮಸ್ಯೆ ಬಗೆಹರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಪರಿಣಾಮ ಬೀರುತ್ತಿದೆ. ವಿದ್ಯಾರ್ಥಿ ನಿಲಯದ ಕಿಟಕಿ ಗ್ಲಾಸ್ ಒಡೆದು ಹೋಗಿವೆ. ಬಾಗಿಲುಗಳು ಹಾಳಾಗಿವೆ. ಅಲ್ಲದೇ ಕೊಠಡಿಗಳಲ್ಲಿ ಫ್ಯಾನ್‌ಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕಂಪ್ಯೂಟರ್ ವ್ಯವಸ್ಥೆಯಿಲ್ಲ. ಹಾಗೂ ವೈಫೈ ಸೌಲಭ್ಯವು ಇಲ್ಲ.
ಈ ಹಿಂದೆ ಹಲವು ಸೌಲಭ್ಯಗಳನ್ನು ನೀಡಲಾಗಿದ್ದು, ಕೆಲವು ವರ್ಷಗಳಿಂದ ಈ ಯಾವುದೇ ವ್ಯವಸ್ಥೆಗಳು ಸಮರ್ಪಕವಾಗಿಲ್ಲ. ನಿಲಯದ ಸುತ್ತಲು ಕಸದ ರಾಶಿಯಿದ್ದು , ತೆರವುಗೊಳಿಸಿಲ್ಲ. ಅಲ್ಲದೆ ರಾತ್ರಿ ವೇಳೆಯಲ್ಲಿ ನಿಲಯಕ್ಕೆ ಓಡಾಡಲು ಸರಿಯಾದ ರಸ್ತೆ ವ್ಯವಸ್ಥೆ ಹಾಗೂ ಬೀದಿ ದೀಪದ ವ್ಯವಸ್ಥೆಗಳು ಇಲ್ಲವಾದ್ದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಎಂ.ಎಚ್.ಮುಂತಾಹಿರ್, ದ್ವಿತೀಯ ಎಂ.ಎ., ಪತ್ರಿಕೋದ್ಯಮ ಮೈಸೂರು ವಿಶ್ವವಿದ್ಯಾನಿಲಯ


