Andolana originals

ಓದುಗರ ಪತ್ರ: ಮಲಾರ ಕಾಲೋನಿ ಗ್ರಾಮಕ್ಕೆ ಸ್ಮಶಾನ ಜಾಗ ಒದಗಿಸಿ

ಮೈಸೂರು ಜಿಲ್ಲೆ, ಎಚ್.ಡಿ. ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ‘ಮಲಾರ ಕಾಲೋನಿ’ ಗ್ರಾಮವು ಒಂದು ಸ್ವಚ್ಛ ಗ್ರಾಮವಾಗಿದೆ. ಈ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರು ಹೆಚ್ಚಾಗಿ ವಾಸವಿದ್ದಾರೆ. ಬೆಳಗನಹಳ್ಳಿ ಕಾವಲ್‌ನ ಸರ್ವೆ ನಂಬರ್ ೧ರಲ್ಲಿ ೨೦೧೦-೧೧ರಲ್ಲಿ ಆರ್‌ಟಿಸಿ ಸ್ಕೆಚ್ ಆಗಿದೆ. ಇಲ್ಲಿ ಸುಮಾರು ೧ ಎಕರೆ, ಐದು ಗುಂಟೆ ಜಾಗವಿದ್ದು, ಅಕ್ಕ ಪಕ್ಕದವರು ಒತ್ತುವರಿ ಮಾಡಿಕೊಂಡಿದ್ದಾರೆ.

ಗ್ರಾಮದಲ್ಲಿ ಸಾವು ಸಂಭವಿಸಿದರೆ ಶವಸಂಸ್ಕಾರ ಮಾಡಲು ಜಾಗವಿಲ್ಲದೆ ಪರದಾಡುವ ಪರಿಸ್ಥಿತಿ ಇದೆ. ಈ ಗ್ರಾಮದಲ್ಲಿ ಬಡ ಕುಟುಂಬಗಳು ಹೆಚ್ಚು ಇವೆ. ಕೆಲವರು ತಮ್ಮ ಜಮೀನಿನಲ್ಲಿ ಶವ ಸಂಸ್ಕಾರ ಮಾಡುತ್ತಾರೆ, ಕೆಲವರಿಗೆ ಜಮೀನು ಇಲ್ಲದೆ, ಶವ ಸಂಸ್ಕಾರ ಮಾಡಲು ಜಾಗವೂ ಇಲ್ಲದೆ ಪರದಾಡುತ್ತಿದ್ದಾರೆ. ಈ ವಿಚಾರವನ್ನು ತಾಲ್ಲೂಕು ಕಚೇರಿಯ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದರೂ ಸ್ಮಶಾನ ಜಾಗ ಒದಗಿಸಲು ಮುಂದಾಗಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು, ಶಾಸಕರು, ಸಂಸದರು, ಮೈಸೂರು ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ‘ಮಲಾರಾ ಕಾಲೋನಿ’ ಗ್ರಾಮಕ್ಕೆ ಶವಸಂಸ್ಕಾರ ಮಾಡಲು ಒತ್ತುವರಿ ಆಗಿರುವ ಜಾಗವನ್ನು ಬಿಡಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಶವ ಸಂಸಾರ ಮಾಡಲು ಶೆಡ್ಡು ನಿರ್ಮಾಣ ಮಾಡಿಕೊಡಬೇಕು ಎಂಬುದು ಗ್ರಾಮಸ್ಥರ ಬೇಡಿಕೆಯಾಗಿದೆ.

 -ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…

14 hours ago

ಹುಬ್ಬೆ ಹುಣಸೆ ಡ್ಯಾಂ ಭರ್ತಿ, ಇದು ಮಾದಪ್ಪನ ಕೃಪೆ ಎಂದ ಶಾಸಕ ಮಂಜುನಾಥ್

ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…

14 hours ago

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

18 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

18 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

18 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

18 hours ago