Andolana originals

ಓದುಗರ ಪತ್ರ: ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ೨೦೨೩-೨೪ ಸಾಲಿನಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡವರಿಗೆ ಪರಿಹಾರವನ್ನು ಘೋಷಿಸಿತ್ತು. ಆದರೆ, ಸರ್ಕಾರ ಬದಲಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪರಿಹಾರ ಮೊತ್ತದ ಕೊನೆಯ ಕಂತನ್ನು ಬಾಕಿ ಉಳಿಸಿಕೊಂಡಿದ್ದು, ಫಲಾನುಭವಿ ಗಳು ಮನೆ ಪೂರ್ಣಗೊಳಿಸಲು ಪರದಾಡುವಂತಾಗಿದೆ.

ಸರ್ಕಾರ ಮನೆಗಳ ಹಾನಿಯ ಪ್ರಮಾಣವನ್ನು ಪರಿಗಣಿಸಿ ಪರಿಹಾರನ್ನು ಘೋಷಿಸಿತ್ತು. ಹೆಚ್ಚು ಹಾನಿಯಾದ ಮನೆಗಳಿಗೆ ೩ ಲಕ್ಷ ರೂ.ಗಳಿಂದ ೫ ಲಕ್ಷ ರೂ.ಗಳವರೆಗೂ ಪರಿಹಾರವನ್ನು ಘೋಷಿಸಿತ್ತು. ಆದರೆ ಸರ್ಕಾರ ಬದಲಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಲಕ್ಷ ರೂ. ಪರಿಹಾರ ಮೊತ್ತದ ಕೊನೆಯ ಕಂತಿನಲ್ಲಿ ೨೫,೦೦೦ ರೂ. ಗಳನ್ನು ಬಾಕಿ ಉಳಿಸಿಕೊಂಡಿದೆ. ಕೊನೆಯ ಬಿಲ್‌ನಲ್ಲಿ ಸರ್ಕಾರ ಫಲಾನುಭವಿಗಳ ಖಾತೆಗೆ ೮೦,೦೦೦ ರೂ.ಗಳನ್ನು ಮಾತ್ರ ಹಾಕಿದ್ದು, ಉಳಿದ ೨೫,೦೦೦ ರೂ. ಗಳನ್ನು ಬಾಕಿ ಉಳಿಸಿಕೊಂಡಿದೆ. ಹಾಗೆಯೇ ಬಸವ ಕಲ್ಯಾಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ೨೦೨೩-೨೪ನೇ ಸಾಲಿನ ಫಲಾನುಭವಿಗಳ ಖಾತೆಗೂ ಹಣ ಮಂಜೂರು ಮಾಡಿ, ಬಳಿಕ ಆ ಹಣವನ್ನು ಸರ್ಕಾರವೇ ಹಿಂಪಡೆದುಕೊಂಡಿದೆ. ಇದರಿಂದ ಮನೆ ಕಳೆದುಕೊಂಡವರು ಮನೆಯನ್ನು ಪೂರ್ಣವಾಗಿ ನಿರ್ಮಿಸಿಕೊಳ್ಳಲಾಗದೆ ಪರದಾಡುವಂತಾಗಿದೆ. ಇದರೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಮನೆಗಳಿಗೂ ಸರಿಯಾಗಿ ಪರಿಹಾರವನ್ನು ನೀಡಿಲ್ಲ. ಇದರಿಂದಾಗಿ ಮನೆ ನಿರ್ಮಾಣ ಮಾಡಿಕೊಳ್ಳಲು ಬಡಜನರು ಪರದಾಡುವಂತಾಗಿದ್ದು, ಸರ್ಕಾರ ಈ ಬಗ್ಗೆ ಕ್ರಮವಹಿಸಿ ಆದಷ್ಟು ಬೇಗ ಪರಿಹಾರವನ್ನು ನೀಡಬೇಕು.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

1 hour ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

1 hour ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

2 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

7 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

7 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

7 hours ago