ಓದುಗರ ಪತ್ರ
ಹೆಚ್.ಡಿ. ಕೋಟೆ ಪಟ್ಟಣದಲ್ಲಿ ಸಾರ್ವಜನಿಕ ಆಸ್ಪತ್ರೆ ಹಾಗೂ ಮಕ್ಕಳ ಆಸ್ಪತ್ರೆ ಪ್ರತ್ಯೇಕವಾಗಿವೆ. ಆದರೆ ಎರಡೂ ಆಸ್ಪತ್ರೆಗಳಿಗೆ ಹೊರ ರೋಗಿಗಳ ಆರೋಗ್ಯ ತಪಾಸಣಾ ಚೀಟಿ ಪಡೆಯಲು ಒಂದೇ ಕೌಂಟರ್ ಇರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.
ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರು ಚಿಕಿತ್ಸೆ ಪಡೆಯಬೇಕಾದರೆ ಮಕ್ಕಳ ಆಸ್ಪತ್ರೆಯ ಎದುರಿನ ಸಾರ್ವಜನಿಕ ಆಸ್ಪತ್ರೆಗೆ ಬಂದು ತಪಾಸಣಾ ಚೀಟಿ ಪೆಯುವುದು ಅಗತ್ಯವಾಗಿದೆ. ಆದರೆ ಈ ಆಸ್ಪತ್ರೆಗೆ ಬರಲು ರಸ್ತೆಯನ್ನು ದಾಟಿ ಬರಬೇಕಾಗಿರುವುದರಿಂದ ಹಲವಾರು ಬಾರಿ ರಸ್ತೆ ಅಪಘಾತದಲ್ಲಿ ಸಾರ್ವಜನಿಕರು ಕೈಕಾಲು ಮುರಿದುಕೊಂಡಿರುವ ಘಟನೆಗಳು ನಡೆದಿವೆ. ಆದ್ದರಿಂದ ಶಾಸಕರು ಹಾಗೂ ಆಸ್ಪತ್ರೆ ಮುಖ್ಯಸ್ಥರು ಈ ಸಮಸ್ಯೆಯನ್ನು ಮನಗಂಡು ಎರಡೂ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ತಪಾಸಣಾ ಚೀಟಿ ಪಡೆಯಲು ಅವಕಾಶ ಕಲ್ಪಿಸಬೇಕು.
ಆಸ್ಪತ್ರೆಯಲ್ಲಿ ಇರುವ ವ್ಹೀಲ್ ಚೇರ್‌ಗಳ ಚಕ್ರ ಮುರಿದು ಹಾಳಾಗಿದ್ದು, ಇದರಿಂದ ಮೂಳೆ ಮುರಿತಕ್ಕೊಳಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ವಯೋವೃದ್ಧರನ್ನು ಕರೆದೊಯ್ಯಲು ತೊಂದರೆಯಾಗಿದೆ. ಸಂಬಂಧಪಟ್ಟವರು ಕೂಡಲೇ ರೋಗಿಗಳಿಗೆ ಹೊಸ ವ್ಹೀಲ್‌ಚೇರ್ ವ್ಯವಸ್ಥೆ ಮಾಡಬೇಕಾಗಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…