Mysore
22
light rain

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಓದುಗರ ಪತ್ರ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು ಮಾಡದೇ ಇರುವುದರಿಂದ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ.

ಕೆಎಚ್‌ಬಿ ಬಡಾವಣೆ ನಿರ್ಮಾಣವಾಗಿ ೯ ವರ್ಷಗಳು ಕಳೆದರೂ ಕುಡಿಯುವ ನೀರು, ರಸ್ತೆ, ಚರಂಡಿ ಮೊದಲಾದ ಮೂಲಭೂತ ಸೌಕರ್ಯವಿಲ್ಲದೇ ಇಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿರುವವರಿಗೆ ತೀವ್ರ ತೊಂದರೆಯಾಗಿದೆ.

ಕುಡಿಯುವ ನೀರು ಮೊದಲಾದ ಸೌಕರ್ಯವನ್ನು ಒದಗಿಸುವಂತೆ ಗ್ರಾಮ ಪಂಚಾಯಿತಿ ಅಽಕಾರಿಗಳಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು ಈಗಲಾದರೂ ಬಡಾವಣೆಯ ನಿವಾಸಿಗಳಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.

 -ಕೆ.ಪಿ.ನಂಜುಂಡಸ್ವಾಮಿ ಕೆಂಚಲಗೂಡು, ಜಯಪುರ ಹೋಬಳಿ

Tags:
error: Content is protected !!