ಮೈಸೂರಿನ ಅಶೋಕಪುರಂ ರೈಲು ನಿಲ್ದಾಣ ಅತ್ಯಾಧುನಿಕ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಆರು ಪ್ಲಾಟ್ ಫಾರ್ಮ್‌ಗಳನ್ನು ಹೊಂದಿದೆ. ಈ ರೈಲು ನಿಲ್ದಾಣದಲ್ಲಿ, ಎಸ್ಕಲೇಟರ್ ವ್ಯವಸ್ಥೆ ಇಲ್ಲದೇ 3ರಿಂದ 6 ನೇ ಪ್ಲಾಟ್ ಫಾರ್ಮ್‌ಗಳಿಗೆ ಹೋಗಲು ಮೆಟ್ಟಿಲುಗಳನ್ನು ಹತ್ತಿಕೊಂಡು ಹೋಗಬೇಕಾಗಿದೆ. ಹಿರಿಯ ನಾಗರಿಕರು, ವಯಸ್ಸಾದವರು ಮತ್ತು ವಿಶೇಷಚೇತನರು ಈ ಪ್ಲಾಟ್‌ಫಾರ್ಮ್‌ಗಳಿಗೆ ತಲುಪುವುದಾದರೂ ಹೇಗೆ?.
ಇದರ ಬಗ್ಗೆ ಕನಿಷ್ಠ ತಿಳಿವಳಿಕೆಯಾದರೂ, ಸಂಬಂಧಪಟ್ಟವರಿಗೆ ಇರಬೇಕಲ್ಲವೇ? ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸದೇ ಕೋಟ್ಯಂತರ ರೂ. ಖರ್ಚು ಮಾಡಿ ಹೊಸ ರೈಲು ನಿಲ್ದಾಣ ನಿರ್ಮಾಣ ಮಾಡಿರುವುದು ಕೇವಲ ಪ್ರಚಾರಕ್ಕಾಗಿಯೇ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ.
ಈ ರೈಲು ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಕನಿಷ್ಠ ಮೂಲ ಭೂತ ಸೌಕರ್ಯವೂ ಇಲ್ಲ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೂಡಲೇ ನಿಲ್ದಾಣದಲ್ಲಿ ಎಸ್ಕಲೇಟರ್‌ಅನ್ನು ಅಳವಡಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು





