Andolana originals

ಓದುಗರ ಪತ್ರ:  ಅಶೋಕಪುರಂ ರೈಲು ನಿಲ್ದಾಣದಲ್ಲಿ ಎಸ್ಕಲೇಟರ್ ವ್ಯವಸ್ಥೆ ಕಲ್ಪಿಸಿ

ಮೈಸೂರಿನ ಅಶೋಕಪುರಂ ರೈಲು ನಿಲ್ದಾಣ ಅತ್ಯಾಧುನಿಕ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಆರು ಪ್ಲಾಟ್ ಫಾರ್ಮ್‌ಗಳನ್ನು ಹೊಂದಿದೆ. ಈ ರೈಲು ನಿಲ್ದಾಣದಲ್ಲಿ, ಎಸ್ಕಲೇಟರ್ ವ್ಯವಸ್ಥೆ ಇಲ್ಲದೇ 3ರಿಂದ 6 ನೇ ಪ್ಲಾಟ್ ಫಾರ್ಮ್‌ಗಳಿಗೆ ಹೋಗಲು ಮೆಟ್ಟಿಲುಗಳನ್ನು ಹತ್ತಿಕೊಂಡು ಹೋಗಬೇಕಾಗಿದೆ. ಹಿರಿಯ ನಾಗರಿಕರು, ವಯಸ್ಸಾದವರು ಮತ್ತು ವಿಶೇಷಚೇತನರು ಈ ಪ್ಲಾಟ್‌ಫಾರ್ಮ್‌ಗಳಿಗೆ ತಲುಪುವುದಾದರೂ ಹೇಗೆ?.

ಇದರ ಬಗ್ಗೆ ಕನಿಷ್ಠ ತಿಳಿವಳಿಕೆಯಾದರೂ, ಸಂಬಂಧಪಟ್ಟವರಿಗೆ ಇರಬೇಕಲ್ಲವೇ? ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸದೇ ಕೋಟ್ಯಂತರ ರೂ. ಖರ್ಚು ಮಾಡಿ ಹೊಸ ರೈಲು ನಿಲ್ದಾಣ ನಿರ್ಮಾಣ ಮಾಡಿರುವುದು ಕೇವಲ ಪ್ರಚಾರಕ್ಕಾಗಿಯೇ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ.

ಈ ರೈಲು ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಕನಿಷ್ಠ ಮೂಲ ಭೂತ ಸೌಕರ್ಯವೂ ಇಲ್ಲ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೂಡಲೇ ನಿಲ್ದಾಣದಲ್ಲಿ ಎಸ್ಕಲೇಟರ್‌ಅನ್ನು ಅಳವಡಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

2 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

2 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

2 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

3 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

3 hours ago