ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪ ಮಂದಿ ಮೃತ ಪೌರ ಕಾರ್ಮಿಕರ ಕುಟುಂಬಗಳಿಗೆ ನೌಕರಿ ನೀಡದ ಕಾರಣ ಚಿಂದಿ ಆಯುತ್ತಿರುವುದು ಸಫಾಯಿಕರ್ಮಚಾರಿಗಳ ಆಯೋಗದ ಅಧ್ಯಕ್ಷ ರಘು ಅವರು ಆಯೋಜಿಸಿದ್ದ ಕುಂದುಕೊರತೆಗಳ ಸಭೆಯಲ್ಲಿ ಮಾಧ್ಯಮಗಳ ಮೂಲಕ ಬೆಳಕಿಗೆ ಬಂದಿದೆ.
ಮುಂಜಾನೆಯೇ ಎದ್ದು ನಗರವನ್ನು ಸ್ವಚ್ಛಗೊಳಿಸಿ ಸಮಾಜದ ಸ್ವಾಸ್ಥ್ಯ ಕಾಪಾಡುತ್ತಿರುವ ಪೌರ ಕಾರ್ಮಿಕರ ಸಮಸ್ಯೆಯನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಕಾಳಜಿ ವಹಿಸಬೇಕು. ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರು ನೀಡಿರುವ ಭರವಸೆ ಶೀಘ್ರದಲ್ಲಿ ಅನುಷ್ಠಾನಗೊಂಡರೆ ಪೌರ ಕಾರ್ಮಿಕರಿಗೆ ನ್ಯಾಯ ಕಲ್ಪಿಸಿದಂತಾಗುತ್ತದೆ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





