ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಿದೆ. ಇದು ಮಕ್ಕಳ ಸುರಕ್ಷತೆಯ ಪ್ರಶ್ನೆಯಾಗಿದೆ. ರಾಜ್ಯ ಸರ್ಕಾರ ಹೊಸದಾಗಿ ಪ್ರಾರಂಭಿಸಿರುವ ಪಬ್ಲಿಕ್ ಶಾಲೆಗಳಿಗೂ ಕಟ್ಟಡ ಮೊದಲಾದ ಮೂಲಭೂತ ಸೌಕರ್ಯ ಕಲ್ಪಿಸದೇ ಇರುವುದು ಬೇಸರದ ಸಂಗತಿಯಾಗಿದೆ. ರಾಜ್ಯ ಸರ್ಕಾರ ಕೇಂದ್ರದ ಸಹಕಾರದೊಂದಿಗೆ ಸರ್ಕಾರಿ ಶಾಲೆಗಳಿಗೆ ಶಾಲೆಗಳಿಗೆ ಅಗತ್ಯವಾದ ಕೊಠಡಿಗಳು, ಕುಡಿಯುವ ನೀರು, ಗ್ರಂಥಾಲಯ, ಕಲಿಕಾ ಸಾಮಗ್ರಿಗಳು ಆಟದ ಮೈದಾನ, ಶೌಚಾಲಯ ಮೊದಲಾದ ಸೌಲಭ್ಯಗಳನ್ನು ಕಲ್ಪಿಸುವುದು ಅಗತ್ಯವಾಗಿದೆ.
-ಡಾ.ಎಚ್.ಕೆ.ವಿಜಯಕುಮಾರ, ಬೆಂಗಳೂರು





