ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಬಸ್ ನಿಲ್ದಾಣದಿಂದ ಸಂಜೆ ೭ರ ನಂತರ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ. ಒಂದು ಬಸ್ಸು ಬಂದ ನಂತರ ಇನ್ನೊಂದು ಬಸ್ ಬರಲು ಕನಿಷ್ಠ ೧೫ ನಿಮಿಷಗಳಾದರೂ ಬೇಕಾಗುತ್ತದೆ. ಕೆಲವೊಮ್ಮೆ ಬಸ್ ಚಾಲಕರು ನಿಲ್ದಾಣದಲ್ಲಿ ನಿಲ್ಲಿಸದೇ ಮುಂದೆ ಹೋಗಿ ನಿಲ್ಲಿಸುತ್ತಾರೆ. ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ನಗರ ಸಾರಿಗೆ ಅಧಿಕಾರಿಗಳು ಕೂಡಲೇ ಸಾಕಷ್ಟು ಬಸ್ ಸೌಲಭ್ಯ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.
– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು





