ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ ಬರುವುದಿಲ್ಲ ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕುವೆಂಪುನಗರ ‘ಎಂ ಬ್ಲಾಕ್’ ತಂಗುದಾಣದಿಂದ ಅವಸರದಿಂದ ನಡೆದುಕೊಂಡು ಹೋಗಿ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಹೋಗಿ ಬೇರೆ ಬೇರೆ ಕಡೆಯಿಂದ ಬರುವ ಬಸ್ಸುಗಳನ್ನು ಹತ್ತುವ ಪ್ರಸಂಗ ಎದುರಾಗಿದೆ, ಆದ್ದರಿಂದ ಬೆಳಗಿನ ವೇಳೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕುವೆಂಪುನಗರ ಎಂ ಬ್ಲಾಕ್‌ಗೆ ನಗರ ಸಾರಿಗೆ ಅಧಿಕಾರಿಗಳು ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸ ಬೇಕು.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು





