ಓದುಗರ ಪತ್ರ
ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುತ್ತದೆ. ಈ ಸಂದರ್ಭದಲ್ಲಿ ಸೀಟಿಗಾಗಿ ಪ್ರಯಾಣಿಕರ ನಡುವೆ ತಳ್ಳಾಟ, ನೂಕಾಟಗಳು ಹಾಗೂ ಕೈಕೈ ಮಿಲಾಯಿಸುವ ಪ್ರಸಂಗಗಳು ನಡೆಯುತ್ತಿದ್ದರೂ ನಿಲ್ದಾಣದಲ್ಲಿರುವ ಪೊಲೀಸರು ಮೂಕ ಪ್ರೇಕ್ಷಕರಾಗಿರುತ್ತಾರೆ. ಶಕ್ತಿ ಯೋಜನೆ ಜಾರಿಯಲ್ಲಿರುವುದರಿಂದ ಪುರುಷರಿಗಿಂತಲೂ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಜನ ಸಂದಣಿಯಲ್ಲಿ ಮಕ್ಕಳೊಂದಿಗೆ ಬಸ್ ಹತ್ತಲು ಹರ ಸಾಹಸ ಪಡಬೇಕಾಗಿದೆ. ಸಾರಿಗೆ ನಿಗಮದ ಅಧಿಕಾರಿಗಳು ಕೂಡಲೇ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ನಾಗರಾಜಪ್ಪ, ಚಿಕ್ಕಬಳ್ಳಾಪುರ
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…