ಓದುಗರ ಪತ್ರ
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ ಸಾರಿಗೆ ಬಸ್‌ಗಳು ಸಂಚರಿಸದೇ ಇರುವುದರಿಂದ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಲು ಹಾಗೂ ಸಂಜೆಯ ವೇಳೆ ವಸತಿನಿಲಯಕ್ಕೆ ಮರಳಲು ತೀವ್ರ ತೊಂದರೆಯಾಗಿದೆ.
ಬೆಳಿಗ್ಗೆ ೭.೩೦ಕ್ಕೆ ಒಂದು ಬಸ್ ಬಂದರೆ ನಂತರದ ಬಸ್ ೮.೩೦ಕ್ಕೆ ಬರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಕೆಲಸಕ್ಕೆ ತೆರಳುವ ಸಾರ್ವಜನಿಕರಿಗೆ ಬಸ್‌ಗಳಿಲ್ಲದೇ ತೊಂದರೆಯಾಗುತ್ತಿದೆ. ಸಂಬಂಧಪಟ್ಟವರು ಕೂಡಲೇ ಪ್ರತಿನಿತ್ಯ ಬೆಳಿಗ್ಗೆ ೭.೩೦ರಿಂದ ೧೦ ಗಂಟೆಯವರೆಗೆ ಮತ್ತು ಸಂಜೆ ೪ರಿಂದ ೬ ಗಂಟೆವರೆಗೆ ಹೆಚ್ಚಿನ ಬಸ್ ಸೌಲಭ್ಯವನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಜಿ.ಪೂಜಾ, ದ್ವಿತೀಯ ಬಿ.ಎ. ಪತ್ರಿಕೋದ್ಯಮ ವಿಭಾಗ, ಮಹಾರಾಣಿ ಕಲಾ ಕಾಲೇಜು, ಮೈಸೂರು
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…
ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…
ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…