Andolana originals

ಓದುಗರ ಪತ್ರ:  ಎಚ್.ಡಿ. ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಸೌಲಭ್ಯ ಕಲ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿನಿತ್ಯ ನೂರಾರು ಜನರು ಚಿಕಿತ್ಸೆಗಾಗಿ ಬರುತ್ತಾರೆ . ಈ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಲಭ್ಯವಿದ್ದರೂ ಇಲ್ಲಿನ ಸಿಬ್ಬಂದಿ ರೋಗಿಗಳನ್ನು ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗೆ ಕಳುಹಿಸುತ್ತಾರೆ. ಬಡ ರೋಗಿಗಳು ಹಾಗೂ ಕೂಲಿ ಕಾರ್ಮಿಕರು ಖಾಸಗಿ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಸ್ಕ್ಯಾನಿಂಗ್ ಮಾಡಿಸಲು ಸಾವಿರಾರು ರೂ. ತೆರಬೇಕಾಗಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಯಲ್ಲಿರುವ ಸ್ಕ್ಯಾನಿಂಗ್ ಹಾಗೂ ಇತರ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಿದರೆ ಬಡಜನರಿಗೆ ನೆರವಾಗುತ್ತದೆ.

ಆಸ್ಪತ್ರೆಯಲ್ಲಿ ರಕ್ತನಿಧಿ ಕೇಂದ್ರ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅಪಘಾತ, ಶಸಚಿಕಿತ್ಸೆ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ರಕ್ತದ ಅಗತ್ಯವಿದ್ದಲ್ಲಿ ಮೈಸೂರಿನ ಕೆ. ಆರ್. ಆಸ್ಪತ್ರೆಯ ರಕ್ತನಿಧಿ ಕೇಂದ್ರಕ್ಕೆ ಕಳುಹಿಸುತ್ತಾರೆ. ರಕ್ತ ಸಿಗುವುದು ತಡವಾದರೆ ರೋಗಿಗಳ ಜೀವಕ್ಕೇ ಎರವಾಗುವ ಸಾಧ್ಯತೆಯಿರುತ್ತದೆ.

ತಾಲ್ಲೂಕು ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ಸಕಾಲದಲ್ಲಿ ರಕ್ತ ಸಿಗುವ ಹಾಗೆ ವ್ಯವಸ್ಥೆ ಮಾಡಿದರೆ ರೋಗಿಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಶಾಸಕರು ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.

– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago