Andolana originals

ಓದುಗರ ಪತ್ರ: ಕೆ.ಆರ್.ಎಸ್.ಗೆ ಭದ್ರತೆ ಒದಗಿಸಿ

ಮಂಡ್ಯ ಜಿಲ್ಲೆಯ ಜೀವನಾಡಿಯಾಗಿರುವ ಕೆ.ಆರ್.ಎಸ್. ಜಲಾಶಯಕ್ಕೆ ಸಾಕಷ್ಟು ಭದ್ರತೆ ಇಲ್ಲದೇ ಸಾರ್ವಜನಿಕರು ಎಲ್ಲೆಂದರಲ್ಲಿ ರಾಜಾರೋಷವಾಗಿ ಓಡಾಡುತ್ತಾರೆ. ಕ್ರೆಸ್ಟ್ ಗೇಟ್‌ಗಳ ಬಳಿ ಹೋಗಿ ವಿಡಿಯೋ, ರೀಲ್ಸ್ ಮಾಡುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆ.ಆರ್.ಎಸ್. ಜಲಾಶಯದ ಭದ್ರತೆಗಾಗಿ ಹತ್ತಾರು ಕೋಟಿ ರೂಪಾಯಿಗಳನ್ನು ಸರ್ಕಾರ ಖರ್ಚು ಮಾಡುವುದಾಗಿ ಹೇಳುತ್ತದೆ, ಆದರೆ ಈ ಹಣ ಯಾರ ಜೇಬು ಸೇರುತ್ತಿದೆ ಎಂಬುದು ತಿಳಿದಿಲ್ಲ.

ಸುಮಾರು ೨೫ ವರ್ಷಗಳ ಹಿಂದೆ, ಬಂಗಾರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ತಮಿಳುನಾಡು ಸರ್ಕಾರ ಕಾವೇರಿ ನದಿ ನೀರಿಗಾಗಿ ಕ್ಯಾತೆ ತೆಗೆದಿದ್ದು, ಆಗ, ಕೆ.ಆರ್.ಎಸ್. ಅನ್ನು ಸಂರಕ್ಷಣೆ ಮಾಡಿಕೊಳ್ಳುವ ಉದ್ದೇಶದಿಂದ ಅಂದಿನಿಂದಲೂ ಭದ್ರತೆ ಒದಗಿಸಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ, ಯಾವುದೇ ರೀತಿಯ ಭದ್ರತೆ ಇಲ್ಲದೇ ರಾಜಾರೋಷವಾಗಿ ಯಾರು ಬೇಕಾದರೂ ಇಲ್ಲಿ ಓಡಾಡಬಹುದು ಎನ್ನುವಂತಾಗಿದೆ.

ಶನಿವಾರ, ಭಾನುವಾರ ಮತ್ತು ರಜಾ ದಿನಗಳಲ್ಲಿ ಕೆಲವರು ಮದ್ಯ ಸೇವಿಸಿ ಬಾಟಲಿಗಳನ್ನು ಅಲ್ಲಿಯೇ ಬಿಸಾಡುತ್ತಾರೆ, ಅಲ್ಲದೆ ಅನೈತಿಕ ಚಟುವಟಿಕೆಗಳ ತಾಣವಾಗಿಯೂ ಮಾರ್ಪಟ್ಟಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಐತಿಹಾಸಿಕ ಜಲಾಶಯ, ಹಾಗೂ ಪ್ರಸಿದ್ಧ ಪ್ರವಾಸಿ ತಾಣದ ಮಹತ್ವವನ್ನೇ ಅರಿತಿಲ್ಲ. ಭದ್ರತಾ ಲೋಪದಿಂದ ಒಂದು ವೇಳೆ ಏನಾದರೂ ಅವಘಡ ಸಂಭವಿಸಿದರೆ, ಅದಕ್ಕೆ ಯಾರು ಹೊಣೆ?

 – ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

5 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

5 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದತಿಗಿಂತ ‘ಶುದ್ಧೀಕರಣ’ ತುರ್ತು ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…

5 hours ago

ಆರೋಗ್ಯಕರ ನಾಳೆಗಾಗಿ ಆಯುರ್ವೇದ – ಒಂದು ಆರೋಗ್ಯ, ಒಂದು ಭವಿಷ್ಯ

ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…

6 hours ago

ಡಾ.ಎಸ್.ಜೆ. ನಾಗಲೋಟಿಮಠ ಅವರ ಸ್ಛೂರ್ತಿದಾಯಕ ನಡವಳಿಕೆ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ…

6 hours ago

ಯುವನಿಧಿ; ೨,೧೭೯ ಮಂದಿಗೆ ೬.೩೦ ಕೋಟಿ ರೂ. ನೆರವು

ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ  ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…

6 hours ago