ದಸರಾ ಸಂದರ್ಭದಲ್ಲಿ ಹೊಟ್ಟೆಪಾಡಿಗಾಗಿ ಅಲೆಮಾರಿ ಜನಾಂಗದವರು ಸುಮಾರು ೧೫ ದಿನಗಳ ಕಾಲ ಬಲೂನ್ ಹಾಗೂ ಮಕ್ಕಳ ಆಟಿಕೆಗಳನ್ನು ವ್ಯಾಪಾರ ಮಾಡಲು ಮೈಸೂರಿಗೆ ಬರುತ್ತಾರೆ. ಆದರೆ ಇವರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ರಸ್ತೆ ಬದಿಯಲ್ಲೇ ಟೆಂಟ್‌ಗಳನ್ನು ಹಾಕಿಕೊಂಡು ವಾಸಿಸುತ್ತಾರೆ.
ಈ ಬಾರಿಯ ದಸರಾದಲ್ಲಿ ಬಲೂನ್ ಮಾರಲು ಬಂದಿದ್ದ ಅಲೆಮಾರಿ ಕುಟುಂಬದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ನಾಗರಿಕ ಸಮಾಜವನ್ನೆ ತಲೆ ತಗ್ಗಿಸುವಂತೆ ಮಾಡಿದೆ. ಆದ್ದರಿಂದ ಜಿಲ್ಲಾಡಳಿತ ಮುನ್ನೆಚ್ಚರಿಕೆಯ ಕ್ರಮವಾಗಿ ವ್ಯಾಪಾರಕ್ಕೆ ಬರುವ ಅಲೆಮಾರಿ ಕುಟುಂಬಗಳಿಗೆ ತಾತ್ಕಾಲಿಕ ಸೂರಿನ ವ್ಯವಸ್ಥೆ ಕಲ್ಪಿಸುವ ಮೂಲಕ ಇಂತಹ ಕೃತ್ಯಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕಾಗಿದೆ.
– ಪಿ.ಸಿ.ಕಂಗಾಣಿಸೋಮು,ಕ್ಯಾತಮಾರನಹಳ್ಳಿ, ಮೈಸೂರು





