ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುತ್ತದೆ.
ಆರೋಗ್ಯ ಹಾಳಾದರೆ ವಾರ್ಷಿಕ ಪರೀಕ್ಷೆಗೂ ಹಾಜರಾಗದಂತ ಪರಿಸ್ಥಿತಿ ನಿರ್ಮಾಣವಾಗಿ ಅವರ ಭವಿಷ್ಯಕ್ಕೆ ಮಾರಕವಾಗುತ್ತದೆ. ಸಂಬಂಧಪಟ್ಟವರು ಮುಂಜಾನೆ ಪತ್ರಿಕೆ ವಿತರಿಸುವ ಮಕ್ಕಳಿಗೆ ಬೆಚ್ಚನೆಯ ಉಡುಪನ್ನು ವಿತರಿಸುವ ಮೂಲಕ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸುವುದು ಅಗತ್ಯವಾಗಿದೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು



