ಓದುಗರ ಪತ್ರ
ತಾಳಗುಪ್ಪದಿಂದ ಶಿವಮೊಗ್ಗ ಮಾರ್ಗವಾಗಿ ಮೈಸೂರಿಗೆ ಬರುವ ಇಂಟರ್‌ಸಿಟಿ ಎಕ್ಸ್‌ಪ್ರೆಸ್ (೧೬೨೦೫) ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರು ಪರದಾಡಿದರು. ಈ ರೈಲಿನಲ್ಲಿ ಎದುರಾದ ಅವ್ಯವಸ್ಥೆ ಕಂಡು ಬೇಸರವಾಯಿತು. ಹಳೆಯ ಕಾಲದ ಬೋಗಿಗಳು. ಇಲ್ಲಿರುವ ಶೌಚಾಲಯಗಳಲ್ಲಿ ಕೆಲವಕ್ಕೆ ದೀಪದ ವ್ಯವಸ್ಥೆಯಿಲ್ಲ, ಶೌಚಕ್ಕೆ ಹೋದನಂತರ ಫ್ಲೆಶ್ ಮಾಡಲು ಒತ್ತುವ ಬಟನ್ ಕಾರ್ಯನಿರ್ವಹಿಸುತ್ತಿಲ್ಲ. ಮುಖ್ಯವಾಗಿ ನೀರೇ ಇಲ್ಲದೇ ಪ್ರಯಾಣಿಕರು ಪರದಾಡುವಂತಾಯಿತು. ತಾಳಗುಪ್ಪದಲ್ಲೇ ರೈಲಿಗೆ ನೀರು ತುಂಬಿಸಬೇಕಿತ್ತು. ಇಲ್ಲವಾದರೆ ಶಿವಮೊಗ್ಗದಲ್ಲಿ ನೀರು ತುಂಬಿಸಬೇಕಿತ್ತು. ಆದರೆ ನೀರು ತುಂಬಿಸಿಲ್ಲದ ಕಾರಣ ಶಿವಮೊಗ್ಗದಿಂದ ಮೈಸೂರಿಗೆ ಬರುವವರೆಗೂ ಕೈತೊಳೆಯಲು ಹಾಗೂ ಶೌಚಕ್ಕೆ ಹೋಗಲು ನೀರಿಲ್ಲದೆ ಪ್ರಯಾಣಿಕರು ಸಂಕಟ ಅನುಭವಿಸಿದರು. ರೈಲಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಾಗಿ ಪ್ರಯಾಣಿಸುತ್ತಾರೆ. ಪ್ರಯಾಣದ ಅವಽ ೫ ಗಂಟೆಗಳಿಗೂ ಹೆಚ್ಚು ಕಾಲ ಆಗಿರುವುದರಿಂದ ಶೌಚಾಲಯಕ್ಕೆ ಹೋಗುವುದು ಅನಿವಾರ್ಯವಾಗುತ್ತದೆ. ರೈಲಿನ ಅವ್ಯವಸ್ಥೆಯಿಂದಾಗಿ ಶಿವಮೊಗ್ಗದಲ್ಲಿ ರೈಲು ಹತ್ತಿದವರು ಶೌಚಕ್ಕೆ ತೆರಳಲು ಮೈಸೂರು ರೈಲು ನಿಲ್ದಾಣಕ್ಕೆ ಬರಬೇಕಾದ ಪರಿಸ್ಥಿತಿಯಿದೆ. ಬೆಂಗಳೂರು- ಶಿವಮೊಗ್ಗ ನಡುವೆ ಸಂಚರಿಸುವ ರೈಲುಗಳಿಗೆ ಹೊಸ ಬೋಗಿಗಳು ಸೇರಿದಂತೆ ಸಕಲ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ಆದರೆ ಮೈಸೂರು ವಿಭಾಗದಿಂದ ಹೊರಡುವ ರೈಲುಗಳಲ್ಲಿ ಅವ್ಯವಸ್ಥೆ ಹೆಚ್ಚಾಗಿದೆ. ಪ್ರಯಾಣಿಕರು ಯಾಕಾದರೂ ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದೇವೋ ಎಂದು ಬೇಸರ ಪಟ್ಟುಕೊಳ್ಳುವಂತಾಗಿದೆ. ಮೈಸೂರು ವಿಭಾಗೀಯ ರೈಲ್ವೆ ಅಧಿಕಾರಿಗಳು ರೈಲಿನಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.
-ಎಸ್.ಶ್ರೀದೇವಿ, ಮೈಸೂರು
ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…
ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…
ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…
ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್ ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…