Andolana originals

ಓದುಗರ ಪತ್ರ: ರೈಲಿನಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಿ

ತಾಳಗುಪ್ಪದಿಂದ ಶಿವಮೊಗ್ಗ ಮಾರ್ಗವಾಗಿ ಮೈಸೂರಿಗೆ ಬರುವ ಇಂಟರ್‌ಸಿಟಿ ಎಕ್ಸ್‌ಪ್ರೆಸ್ (೧೬೨೦೫) ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರು ಪರದಾಡಿದರು. ಈ ರೈಲಿನಲ್ಲಿ ಎದುರಾದ ಅವ್ಯವಸ್ಥೆ ಕಂಡು ಬೇಸರವಾಯಿತು. ಹಳೆಯ ಕಾಲದ ಬೋಗಿಗಳು. ಇಲ್ಲಿರುವ ಶೌಚಾಲಯಗಳಲ್ಲಿ ಕೆಲವಕ್ಕೆ ದೀಪದ ವ್ಯವಸ್ಥೆಯಿಲ್ಲ, ಶೌಚಕ್ಕೆ ಹೋದನಂತರ ಫ್ಲೆಶ್ ಮಾಡಲು ಒತ್ತುವ ಬಟನ್ ಕಾರ್ಯನಿರ್ವಹಿಸುತ್ತಿಲ್ಲ. ಮುಖ್ಯವಾಗಿ ನೀರೇ ಇಲ್ಲದೇ ಪ್ರಯಾಣಿಕರು ಪರದಾಡುವಂತಾಯಿತು. ತಾಳಗುಪ್ಪದಲ್ಲೇ ರೈಲಿಗೆ ನೀರು ತುಂಬಿಸಬೇಕಿತ್ತು. ಇಲ್ಲವಾದರೆ ಶಿವಮೊಗ್ಗದಲ್ಲಿ ನೀರು ತುಂಬಿಸಬೇಕಿತ್ತು. ಆದರೆ ನೀರು ತುಂಬಿಸಿಲ್ಲದ ಕಾರಣ ಶಿವಮೊಗ್ಗದಿಂದ ಮೈಸೂರಿಗೆ ಬರುವವರೆಗೂ ಕೈತೊಳೆಯಲು ಹಾಗೂ ಶೌಚಕ್ಕೆ ಹೋಗಲು ನೀರಿಲ್ಲದೆ ಪ್ರಯಾಣಿಕರು ಸಂಕಟ ಅನುಭವಿಸಿದರು. ರೈಲಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಾಗಿ ಪ್ರಯಾಣಿಸುತ್ತಾರೆ. ಪ್ರಯಾಣದ ಅವಽ ೫ ಗಂಟೆಗಳಿಗೂ ಹೆಚ್ಚು ಕಾಲ ಆಗಿರುವುದರಿಂದ ಶೌಚಾಲಯಕ್ಕೆ ಹೋಗುವುದು ಅನಿವಾರ್ಯವಾಗುತ್ತದೆ. ರೈಲಿನ ಅವ್ಯವಸ್ಥೆಯಿಂದಾಗಿ ಶಿವಮೊಗ್ಗದಲ್ಲಿ ರೈಲು ಹತ್ತಿದವರು ಶೌಚಕ್ಕೆ ತೆರಳಲು ಮೈಸೂರು ರೈಲು ನಿಲ್ದಾಣಕ್ಕೆ ಬರಬೇಕಾದ ಪರಿಸ್ಥಿತಿಯಿದೆ. ಬೆಂಗಳೂರು- ಶಿವಮೊಗ್ಗ ನಡುವೆ ಸಂಚರಿಸುವ ರೈಲುಗಳಿಗೆ ಹೊಸ ಬೋಗಿಗಳು ಸೇರಿದಂತೆ ಸಕಲ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ಆದರೆ ಮೈಸೂರು ವಿಭಾಗದಿಂದ ಹೊರಡುವ ರೈಲುಗಳಲ್ಲಿ ಅವ್ಯವಸ್ಥೆ ಹೆಚ್ಚಾಗಿದೆ. ಪ್ರಯಾಣಿಕರು ಯಾಕಾದರೂ ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದೇವೋ ಎಂದು ಬೇಸರ ಪಟ್ಟುಕೊಳ್ಳುವಂತಾಗಿದೆ. ಮೈಸೂರು ವಿಭಾಗೀಯ ರೈಲ್ವೆ ಅಧಿಕಾರಿಗಳು ರೈಲಿನಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಿದೆ.

-ಎಸ್.ಶ್ರೀದೇವಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

37 mins ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

41 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

44 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

48 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

57 mins ago