Andolana originals

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಇದೊಂದು ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ. ಇದರಿಂದಾಗಿ ಸಾವಿರಾರು ಬಡ ವರ್ಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಅನುಕೂಲವಾಗುತ್ತದೆ. ಹಲವಾರು ತಳಸಮುದಾಯಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಕನಿಷ್ಠ ಸೌಲಭ್ಯಗಳೂ ಇರುವುದಿಲ್ಲ, ಇಂತಹ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ.

ಮುಖ್ಯವಾಗಿ ರಾಜ್ಯದ ಸಾರ್ವಜನಿಕರ ಗ್ರಂಥಾಲಯದ ಸೇವೆಯನ್ನು, ಅಗತ್ಯ ಸೇವಾ ವಲಯ ಎಂದು ಪರಿಗಣಿಸ ಬೇಕು. ಏಕೆಂದರೆ ಸಾರ್ವಜನಿಕ ಗ್ರಂಥಾಲಯಗಳು ಪ್ರತಿ ಸೋಮವಾರ, ತಿಂಗಳ ಎರಡನೇ ಮಂಗಳವಾರ, ನಾಲ್ಕನೇ ಶನಿವಾರ ಹಾಗೂ ಸರ್ಕಾರಿ ರಜೆ ದಿನಗಳೂ ಸೇರಿದಂತೆ ವರ್ಷದಲ್ಲಿ ಸುಮಾರು ೧೦೦ ದಿನಗಳ ಕಾಲ ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಎಲ್ಲ ಸಾರ್ವಜನಿಕ ಗ್ರಂಥಾಲಯಗಳು ವರ್ಷದ ೩೬೫ ದಿನಗಳೂ ತೆರೆದು ಸಾರ್ವಜನಿಕರ ಸೇವೆಗೆ ಲಭ್ಯವಾಗುವಂತೆ ಸಚಿವರು ಕ್ರಮ ಕೈಗೊಳ್ಳಬೇಕು.

– ಬೂಕನಕೆರೆ ವಿಜೇಂದ್ರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

9 mins ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

1 hour ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

2 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

2 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

5 hours ago