Andolana originals

ಓದುಗರ ಪತ್ರ: ಅಡ್ಡಾದಿಡ್ಡಿ ವಾಹನ ಚಾಲನೆಗೆ ಕಡಿವಾಣ ಹಾಕಿ

ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ ಸಾಕಷ್ಟು ವಾಹನಗಳು ಸಂಚರಿಸುತ್ತವೆ, ಆದರೆ ಈ ಸರ್ಕಲ್‌ನಲ್ಲಿ ಕೆಲವು ಸಂದರ್ಭದಲ್ಲಿ ವಾಹನ ಚಾಲಕರು ಅಡ್ಡಾ ದಿಡ್ಡಿ ಚಾಲನೆ ಮಾಡುತ್ತಿದ್ದು, ಹಲವಾರಿ ಬಾರಿ ಅಪಘಾತಗಳು ಸಂಭವಿಸಿವೆ. ಯಾವುದೇ ವಾಹನ ಒಂದು ವೃತ್ತವನ್ನು ಬಳಸಿಕೊಂಡು ಹೋಗುವುದು ಒಂದು ನಿಯಮ, ಆದರೆ ಇಲ್ಲಿ ಅದು ತದ್ವಿರುದ್ಧವಾಗಿದೆ. ವಾಹನ ಸವಾರರು ವೃತ್ತವನ್ನು ಬಳಸದೆ ಸಂಚಾರ ನಿಯಮವನ್ನು ಉಲ್ಲಂಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಈ ಸರ್ಕಲ್ ಕೆ.ಆರ್.ಆಸ್ಪತ್ರೆ ಹತ್ತಿರದಲ್ಲೇ ಇರುವುದರಿಂದ ದಿನಕ್ಕೆ ಲೆಕ್ಕವಿಲ್ಲದಷ್ಟು ಆಂಬ್ಯುಲೆನ್ಸ್ ಗಳು ರೋಗಿಗಳನ್ನು ಕರೆದುಕೊಂಡು ಅದೇ ಮಾರ್ಗದಲ್ಲಿ ಹೋಗುತ್ತವೆ. ಈ ಸರ್ಕಲ್‌ನಲ್ಲಿ ಸಿಗ್ನಲ್ ವ್ಯವಸ್ಥೆ ಇದ್ದರೂ ಕೆಲವು ಸಂದರ್ಭದಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಸಂಬಂಧಪಟ್ಟವರು ಕೂಡಲೇ ಅಡ್ಡಾದಿಡ್ಡಿ ವಾಹನ ಚಾಲನೆಗೆ ಕಡಿವಾಣ ಹಾಕಬೇಕಾಗಿದೆ.

-ಬಿ.ಎಸ್.ಸಾಯಿ ಸಂದೇಶ್, ಮೈಸೂರು

 

ಆಂದೋಲನ ಡೆಸ್ಕ್

Recent Posts

ಎರಡು ಗಂಟೆ ಹೆಣ್ಣಾದಾಗಲೇ ಹೀಗೆ! ಪೂರ್ತಿ ಹೆಣ್ಣು ಜನ್ಮದ ಸಂಕಷ್ಟ ಹೇಗಿರಬಹುದು?

ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…

2 hours ago

ಸೈಕಲ್ ನಂಜುಂಡಸ್ವಾಮಿಯ ಪಂಕ್ಚರ್ ಶಾಪ್ ಖಾಲಿ ಖಾಲಿ

ಅಜಯ್ ಕುಮಾರ್ ಎಂ.ಗುಂಬಳ್ಳಿ ಈಗ ಸೈಕಲ್‌ಗಳು ಅತಿವಿರಳ. ಊರಿನಲ್ಲಿ ನಾಲ್ಕೈದು ಮಂದಿ ಹಿರಿಯರು ಇನ್ನೂ ಗದ್ದೆಗೆ, ಕೆಲಸಕ್ಕೆ ಹೋಗಲು ಸೈಕಲ್…

2 hours ago

ಶಾಂತಿದೂತನ ನಾಡಿನಲ್ಲಿ ದ್ವೇಷದ ಕೆನ್ನಾಲಿಗೆ

ಫಾತಿಮಾ ರಲಿಯಾ ಕಳೆದ ಜುಲೈನಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್‌ನ ವಾರ್ವಿಕ್ ಸ್ಟ್ರೀಟ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಆಫ್ರಿಕನ್…

2 hours ago

ಇಂದು ಮೈಸೂರಿನಲ್ಲಿ ಜಾಗತಿಕ ಸೈಕಲ್ ಸವಾರಿ

ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…

2 hours ago

ನಾಳೆ ಅರಮನೆಗೆ ಅಭಿಮನ್ಯು ಪ್ರವೇಶ

ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…

2 hours ago