ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು ಮತ್ತು ಹೆಚ್ಚಿನ ಶುಲ್ಕವನ್ನು ಪಡೆಯಬಾರದು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಹೆಚ್ಚಿನ ಶುಲ್ಕವನ್ನು ಪಡೆದರೆ ಆ ಶಾಲೆಯ ಮಾನ್ಯತೆಯನ್ನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಪೋಷಕರಿಂದ ಗುಪ್ತ ಪ್ರವೇಶ ಶುಲ್ಕವನ್ನು (ರಸೀದಿ ನೀಡದೇ ವಸೂಲಿ ಮಾಡುವ ಹಣ), ಬಲವಂತವಾಗಿ ವಸೂಲು ಮಾಡದಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಪೋಷಕರಿಂದ ದೂರು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ .
ನಮ್ಮ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿಸುವ ಡಿ.ಕೆ. ಶಿವಕುಮಾರ್‌ರವರು ನಮ್ಮ ರಾಜ್ಯದಲ್ಲೂ ಇಂತಹ ಕಟ್ಟುನಿಟ್ಟಿನ ಆದೇಶ ಜಾರಿಗೊಳಿಸುವ ಮೂಲಕ ಖಾಸಗಿ ಶಾಲೆಗಳಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಕಡಿವಾಣ ಹಾಕುವುದು ಅಗತ್ಯ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…