Mysore
23
mist

Social Media

ಬುಧವಾರ, 31 ಡಿಸೆಂಬರ್ 2025
Light
Dark

ಓದುಗರ ಪತ್ರ: ಐಪಿಎಲ್ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಿ

ಓದುಗರ ಪತ್ರ

ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭಗೊಂಡಿದ್ದು, ಎಲ್ಲೆಡೆ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬಹುಬೇಗ ಹಣ ಗಳಿಸಬಹುದು ಎಂಬ ಉದ್ದೇಶದಿಂದ ಕೆಲ ಯುವ ಜನರು ಆನ್‌ಲೈನ್ ಮೂಲಕ ಬೆಟ್ಟಿಂಗ್ ಕಟ್ಟುತ್ತಾರೆ. ಇನ್ನು ಕೆಲವರು ಬುಕ್ಕಿಗಳ ಮೂಲಕ ಹಣ ಕಟ್ಟಿ ಬೆಟ್ಟಿಂಗ್ ಆಡುತ್ತಿದ್ದಾರೆ. ಕೆಲ ಬುಕ್ಕಿಗಳು ಗ್ರಾಮೀಣ ಪ್ರದೇಶದ ಕಾಲೇಜು ವಿದ್ಯಾರ್ಥಿಗಳು, ಯುವಕರನ್ನು ಗುರಿ ಯಾಗಿಸಿಕೊಂಡು ಬೆಟ್ಟಿಂಗ್ ಕಟ್ಟಿಸಿ ಕೊಂಡು ಅವರಿಗೆ ಮೋಸ ಮಾಡುತ್ತಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಬೆಟ್ಟಿಂಗ್ ಜಾಲಕ್ಕೆ ಸಿಲುಕುತ್ತಿರುವುದು ಆತಂಕಕಾರಿಯಾಗಿದೆ. ಯುವಕರು ಬೆಟ್ಟಿಂಗ್ ಕಟ್ಟುವ ಸಲುವಾಗಿ ಸಾಲ ಮಾಡುವುದು, ಮನೆಯಲ್ಲಿಯೇ ಕಳ್ಳತನ ಮಾಡುವುದಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಪೋಷಕರು ಮಕ್ಕಳ ಮೇಲೆ ಕಣ್ಣಿಟ್ಟಿರಬೇಕು. ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಟಿವಿ ಮುಂದೆ ಕೂತು ಕ್ರಿಕೆಟ್ ವೀಕ್ಷಿಸುವುದನ್ನು ತಪ್ಪಿಸಬೇಕು. ಮಕ್ಕಳು ಹಾದಿ ತಪ್ಪುವ ಸುಳಿವು ಸಿಗುತ್ತಿದಂತೆಯೇ ಅವರನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು. ಇತ್ತೀಚೆಗೆ ಬಡ ವಿದ್ಯಾರ್ಥಿಗಳು, ಮಧ್ಯಮ ವರ್ಗದ ಯುವಕರು ತಾವು ದುಡಿದ ಹಣವನ್ನೆಲ್ಲ ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಂಡು, ಸಾಲದ ಸುಳಿಗೆ ಸಿಲುಕಿ ಕೊನೆಗೆ ಆತ್ಮಹತ್ಯೆಯ ಹಾದಿ ಹಿಡಿಯುವುದು ಮಾಮೂಲಿಯಾಗಿದೆ. ಇನ್ನು ಕೆಲವರು ಮನೆಯಲ್ಲಿದ್ದ ಚಿನ್ನಾಭರಣ, ಆಸ್ತಿಪಾಸ್ತಿಗಳನ್ನು ಅಡವಿಟ್ಟು ಬೆಟ್ಟಿಂಗ್ ಆಡುತ್ತಿದ್ದಾರೆ. ಈ ಬೆಟ್ಟಿಂಗ್ ಪ್ರಕ್ರಿಯೆಗಳು ಫೋನ್ ಮೂಲಕವೇ ನಡೆಯುತ್ತಿದ್ದು, ಸೈಬರ್ ಠಾಣಾ ಪೊಲೀಸರು ಈ ಬಗ್ಗೆ ಗಮನಹರಿಸಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕಿದೆ.

 -ಎನ್.ಪಿ.ಪರಶಿವಮೂರ್ತಿ, ಶಿಕ್ಷಕರು, ನಂಜೀಪುರ, ಸರಗೂರು ತಾ.

Tags:
error: Content is protected !!