ಓದುಗರ ಪತ್ರ
ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭಗೊಂಡಿದ್ದು, ಎಲ್ಲೆಡೆ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಬಹುಬೇಗ ಹಣ ಗಳಿಸಬಹುದು ಎಂಬ ಉದ್ದೇಶದಿಂದ ಕೆಲ ಯುವ ಜನರು ಆನ್‌ಲೈನ್ ಮೂಲಕ ಬೆಟ್ಟಿಂಗ್ ಕಟ್ಟುತ್ತಾರೆ. ಇನ್ನು ಕೆಲವರು ಬುಕ್ಕಿಗಳ ಮೂಲಕ ಹಣ ಕಟ್ಟಿ ಬೆಟ್ಟಿಂಗ್ ಆಡುತ್ತಿದ್ದಾರೆ. ಕೆಲ ಬುಕ್ಕಿಗಳು ಗ್ರಾಮೀಣ ಪ್ರದೇಶದ ಕಾಲೇಜು ವಿದ್ಯಾರ್ಥಿಗಳು, ಯುವಕರನ್ನು ಗುರಿ ಯಾಗಿಸಿಕೊಂಡು ಬೆಟ್ಟಿಂಗ್ ಕಟ್ಟಿಸಿ ಕೊಂಡು ಅವರಿಗೆ ಮೋಸ ಮಾಡುತ್ತಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಬೆಟ್ಟಿಂಗ್ ಜಾಲಕ್ಕೆ ಸಿಲುಕುತ್ತಿರುವುದು ಆತಂಕಕಾರಿಯಾಗಿದೆ. ಯುವಕರು ಬೆಟ್ಟಿಂಗ್ ಕಟ್ಟುವ ಸಲುವಾಗಿ ಸಾಲ ಮಾಡುವುದು, ಮನೆಯಲ್ಲಿಯೇ ಕಳ್ಳತನ ಮಾಡುವುದಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಪೋಷಕರು ಮಕ್ಕಳ ಮೇಲೆ ಕಣ್ಣಿಟ್ಟಿರಬೇಕು. ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಟಿವಿ ಮುಂದೆ ಕೂತು ಕ್ರಿಕೆಟ್ ವೀಕ್ಷಿಸುವುದನ್ನು ತಪ್ಪಿಸಬೇಕು. ಮಕ್ಕಳು ಹಾದಿ ತಪ್ಪುವ ಸುಳಿವು ಸಿಗುತ್ತಿದಂತೆಯೇ ಅವರನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು. ಇತ್ತೀಚೆಗೆ ಬಡ ವಿದ್ಯಾರ್ಥಿಗಳು, ಮಧ್ಯಮ ವರ್ಗದ ಯುವಕರು ತಾವು ದುಡಿದ ಹಣವನ್ನೆಲ್ಲ ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಂಡು, ಸಾಲದ ಸುಳಿಗೆ ಸಿಲುಕಿ ಕೊನೆಗೆ ಆತ್ಮಹತ್ಯೆಯ ಹಾದಿ ಹಿಡಿಯುವುದು ಮಾಮೂಲಿಯಾಗಿದೆ. ಇನ್ನು ಕೆಲವರು ಮನೆಯಲ್ಲಿದ್ದ ಚಿನ್ನಾಭರಣ, ಆಸ್ತಿಪಾಸ್ತಿಗಳನ್ನು ಅಡವಿಟ್ಟು ಬೆಟ್ಟಿಂಗ್ ಆಡುತ್ತಿದ್ದಾರೆ. ಈ ಬೆಟ್ಟಿಂಗ್ ಪ್ರಕ್ರಿಯೆಗಳು ಫೋನ್ ಮೂಲಕವೇ ನಡೆಯುತ್ತಿದ್ದು, ಸೈಬರ್ ಠಾಣಾ ಪೊಲೀಸರು ಈ ಬಗ್ಗೆ ಗಮನಹರಿಸಿ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕಿದೆ.
-ಎನ್.ಪಿ.ಪರಶಿವಮೂರ್ತಿ, ಶಿಕ್ಷಕರು, ನಂಜೀಪುರ, ಸರಗೂರು ತಾ.
ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ…
ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ರೇವಣ್ಣ…
ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…
ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…
ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು…
ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…