Mysore
18
scattered clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

dgp murder case

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ ಉಳಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಪಾರ್ಕ್ ಮಾದರಿಯಲ್ಲೇ ಇಲ್ಲೂ ಪಾರ್ಕ್ ನಿರ್ಮಿಸಿ ದರೆ ಜನರಿಗೆ ‘ಜಲ ಸಾಕ್ಷರತೆ’ ದೊರೆಯುತ್ತಿತ್ತು. ಆದರೆ, ಆಳುವವರ ಇಚ್ಛಾಶಕ್ತಿಯ ಕೊರತೆಯಿಂದ ಈ ಯೋಜನೆ ನನೆಗುದಿಗೆ ಬಿದ್ದಿದೆ.

ಅಂಕಿ ಅಂಶಗಳ ಪ್ರಕಾರ, ನಗರೀಕರಣದ ಹೆಸರಿನಲ್ಲಿ ಮೈಸೂರಿನ ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ನಗರದಲ್ಲಿ ಬೀಳುವ ಮಳೆಯಲ್ಲಿ ಶೇ. ೪೦ಕ್ಕೂ ಹೆಚ್ಚು ಪ್ರಮಾಣದ ನೀರು ಪೋಲಾಗಿ ಚರಂಡಿ ಸೇರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಜನರಲ್ಲಿ ಜಾಗೃತಿ ಮೂಡಿಸಬೇಕಾದ ಸರ್ಕಾರ ಕೇವಲ ಬಜೆಟ್ ಭಾಷಣಗಳಿಗೆ ಸೀಮಿತವಾಗಿರುವುದು ದುರಂತ. ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತು ತಕ್ಷಣವೇ ಥೀಮ್ ಪಾರ್ಕ್ ಕಾಮಗಾರಿಯನ್ನು ಆರಂಭಿಸಲಿ.

– ಡಾ. ಎಚ್.ಕೆ.ವಿಜಯಕುಮಾರ,ಬೆಂಗಳೂರು

Tags:
error: Content is protected !!