ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ ಬಾರಿಗೆ ೮ ರೂ. ಏರಿಕೆ ಮಾಡಿದರೆ ಗ್ರಾಹಕರಿಗೆ ಹೊರೆಯಾಗಲಿದೆ. ಆದ್ದರಿಂದ ಸರ್ಕಾರ ಲೀಟರ್‌ಗೆ ೪ ರೂ.ಏರಿಕೆ ಮಾಡಲಿ. ಒಂದು ವೇಳೆ ಇನ್ನೂ ಹೆಚ್ಚಿನ ಏರಿಕೆ ಮಾಡಬೇಕು ಎಂದರೆ ಈಗ ಸರ್ಕಾರ ನೀಡುತ್ತಿರುವ ಸಹಾಯ ಧನವನ್ನು ಹೆಚ್ಚಿಸಲಿ.
ಹಾಲಿನ ದರ ಏರಿಕೆಗೆ ಜನರ ವಿರೋಧ ವೇನೂ ಇಲ್ಲ. ಹೆಚ್ಚಿಸಿದ ಪೂರ್ತಿ ಹಣವನ್ನು ಹೈನುಗಾರರಿಗೆ ನೀಡಲು ಕೆಎಂಎಫ್ ಕ್ರಮ ಕೈಗೊಳ್ಳಬೇಕು.ಮೊಸರು, ಹಾಲಿನ ಪೊಟ್ಟಣಗಳ ದರದಲ್ಲಿ ೨೫೦ ಎಂ ಎಲ್ ಹಾಲಿನ ದರಕ್ಕೂ, ಅರ್ಧ ಲೀಟರ್ ಹಾಲಿನ ದರ ಹಾಗೂ ೧ ಲೀಟರ್ ಹಾಲಿನ ದರಕ್ಕೂ ಅಜ-ಗಜಾಂತರ ವ್ಯತ್ಯಾಸವಿರುತ್ತದೆ. ಎಲ್ಲಾ ಅಳತೆಯ ಪೊಟ್ಟಣಗಳಲ್ಲೂ ಸಮಾನ ದರ ವಿರುವಂತೆ ಮುಖ್ಯ ಮಂತ್ರಿಗಳು ಆದೇಶ ನೀಡಬೇಕು. ಗ್ರಾಹಕ ಪರಿಷತ್, ಗ್ರಾಹಕ ನ್ಯಾಯಾಲಯ ಇದನ್ನು ಗಮನಿಸಿ ಸೂಕ್ತ ಕ್ರಮ ವಹಿಸಬೇಕು. ಕೆಎಂಎಫ್, ತುಪ್ಪ ಬೆಣ್ಣೆಗಳ ಬೆಲೆ ಏರಿಕೆಯನ್ನು ಪದೇ ಪದೇ ಏಕ ಪಕ್ಷೀಯವಾಗಿ ಏರಿಕೆ ಮಾಡುವುದಕ್ಕೆ ಸರ್ಕಾರ ಕಡಿವಾಣ ಹಾಕಬೇಕು.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…
ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕಿನಲ್ಲಿ ಭತ್ತ, ಮುಸುಕಿನ ಜೋಳ ಬೆಳೆಗೆ ರೈತರ ಒತ್ತು ಕುಶಾಲನಗರ: ಮುಂಗಾರು ಮಳೆಯ ಪ್ರಮಾಣದಲ್ಲಿ ಕೊರತೆ ಕಂಡುಬಂದಿರುವುದರ…
ಎಂ.ನಾರಾಯಣ ತಿ.ನರಸೀಪುರ: ನಾಲೆಗಳಿಗೆ ನೀರು ಹರಿಸದ ಕಾರಣ ಒಣಗುತ್ತಿರುವ ದ್ವಿದಳ ಧಾನ್ಯ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿ…