ಓದುಗರ ಪತ್ರ
ಮಾಧ್ಯಮವೊಂದರ ವರದಿ ಪ್ರಕಾರ ಮೌಲ್ಯಾಧಾರಿತ ರಾಜಕಾರಣಿ ಎಂದೇ ಹೆಸರಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ತಮ್ಮ ಕೊನೆಗಾಲದಲ್ಲಿ ತಮ್ಮ ವೈದ್ಯಕೀಯ ಆರೈಕೆಗಾಗಿ ೪೦ ಲಕ್ಷ ರೂ.ಗಳನ್ನು ಹೊಂದಿಸಲಾಗದೆ ತಮಗೆ ಪಿತ್ರಾರ್ಜಿತವಾಗಿ ಬಂದಿದ್ದ ತೋಟವನ್ನು ಮಾರಲು ಸಿದ್ಧರಾಗಿದ್ದರಂತೆ. ಇದನ್ನು ತಿಳಿದ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರು ರಾಮಕೃಷ್ಣ ಹೆಗಡೆಯವರ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಸರ್ಕಾರದಿಂದ ಹಣ ಮಂಜೂರು ಮಾಡಿ ಲಂಡನ್‌ನಲ್ಲಿ ಚಿಕಿತ್ಸೆ ಕೊಡಿಸಿದರಂತೆ. ಇದರಲ್ಲಿ ಎಸ್.ಎಂ.ಕೃಷ್ಣರವರ ಹೃದಯವಂತಿಕೆಯ ಜತೆಗೆ ಐದು ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿದ್ದು, ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರೂ ಹೆಗಡೆಯವರು ತಮ್ಮ ಕೊನೆಗಾಲದಲ್ಲಿ ವೈದ್ಯಕೀಯ ವೆಚ್ಚ ಭರಿಸಲು ಹೆಣಗಾಡಬೇಕಾಗಿ ಬಂದಿದ್ದು, ಅವರಲ್ಲಿನ ಪ್ರಾಮಾಣಿಕತೆಗೆ ಹಿಡಿದ ಕನ್ನಡಿಯಾಗಿದೆ. ಅಂದಿನ ರಾಜಕಾರಣಿಗಳ ಮೌಲ್ಯಯುತ ಬದುಕು ಇಂದಿನ ರಾಜಕಾರಣಿಗಳ ಕಣ್ಣು ತೆರೆಸಬೇಕು. ಪಂಚಾಯಿತಿಯಿಂದ ಪಾರ್ಲಿಮೆಂಟ್‌ವರೆಗೆ ಜನಪ್ರತಿನಿಧಿಯಾದವರೆಲ್ಲರೂ ಐಶಾರಾಮಿ ಜೀವನ ಮಾಡುತ್ತಿರುವಾಗ ರಾಜಕಾರಣಿಯಾದವರ ಬದುಕು ಹೇಗೆ ಮಾದರಿಯಾಗಿರಬೇಕು ಎಂದು ತೋರಿಸಿದವರು ಹೆಗಡೆಯವರು. ಇಂತಹ ಅಪರೂಪದ ರಾಜಕಾರಣಿಯ ವಿರುದ್ಧ ಕೇಳಿಬಂದ ದೂರವಾಣಿ ಕದ್ದಾಲಿಕೆ ಆರೋಪವನ್ನೇ ಮುಂದಿಟ್ಟುಕೊಂಡು ಅದನ್ನೇ ಮಹಾಪರಾಧವೆಂದು ಬಿಂಬಿಸಿ ರಾಜಕೀಯದಿಂದ ಅವರನ್ನು ಬದಿಗೆ ಸರಿಸಲು ಪ್ರಯತ್ನಿಸಿದವರು, ಅವರ ಪ್ರಾಮಾಣಿಕ ಬದುಕನ್ನು ನೋಡದಿದ್ದದ್ದು ಬೇಸರದ ಸಂಗತಿ. ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದ ಗುಲ್ಜಾರಿಲಾಲ್ ನಂದಾ ಅವರೂ ಕೂಡ ಇದೇ ಪರಿಸ್ಥಿತಿ ಅನುಭವಿಸಿದ್ದರು.
–ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…