ಕೊಳ್ಳೇಗಾಲದ ಪ್ರಮುಖ ರಸ್ತೆಗಳಾದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಮತ್ತು ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಈಗ ಮಳೆಗಾಲವಾದ್ದರಿಂದ ಈ ರಸ್ತೆಗಳಲ್ಲಿನ ಗುಂಡಿಗಳಲ್ಲಿ ನೀರು ತುಂಬಿಕೊಂಡು ಗುಂಡಿಗಳು ಕಾಣದೆ ಅನೇಕ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಅಲ್ಲದೆ ಗುಂಡಿ ತಪ್ಪಿಸಲು ಹೋಗಿ ಅನೇಕ ಅಪಘಾತಗಳೂ ಸಂಭವಿಸಿರುವ ಉದಾಹರಣೆಗಳಿವೆ.
ಈ ಗುಂಡಿಗಳಲ್ಲಿ ಸದಾ ನೀರು ನಿಂತಿರುವುದರಿಂದ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದರಿಂದಾಗಿ ಸ್ಥಳೀಯರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಎರಡೂ ರಸ್ತೆಗಳು ಕೊಳ್ಳೇಗಾಲದ ಪ್ರಮುಖ ರಸ್ತೆಗಳಾಗಿದ್ದು, ಇಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಿರುವುದರಿಂದ ಇವು ಜನನಿಬಿಡ ಪ್ರದೇಶಗಳೂ ಆಗಿವೆ. ಹೀಗಾಗಿ ಇಲ್ಲಿ ವಾಹನಗಳ ಸಂಚಾರವೂ ಹೆಚ್ಚಾಗಿದೆ. ಈ ವೇಳೆ ವಾಹನಗಳು ಚಲಿಸಿದಂತೆಲ್ಲ ಗುಂಡಿಗಳಲ್ಲಿನ ನೀರು ಪಾದಚಾರಿಗಳಿಗೆ ಎರಚುತ್ತಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಈ ರಸ್ತೆಯಲ್ಲಿ ಓಡಾಡುವುದೇ ಕಷ್ಟಕರವಾಗಿದೆ.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೇಕ ಬಾರಿ ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿ ಈ ರಸ್ತೆಗಳನ್ನು ಮರುಡಾಂಬರೀಕರಣ ಮಾಡಬೇಕಿದೆ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಹೊಸ…
ಕೆ.ಆರ್.ನಗರ: ಕಳೆದೊಂದು ತಿಂಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಗಂಡು ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕೆ.ಆರ್.ನಗರ ತಾಲೂಕಿನ ಹೆಬ್ಬಾಳು…
ಬೆಂಗಳೂರು: ‘ಡಿಕೆ ಶಿವಕುಮಾರ್ ಅವರದ್ದು ಬಂಡೆ ಹೃದಯವಲ್ಲ, ಹೂವಿನ ಹೃದಯ. ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುತ್ತಾರೆ’ ಎಂದು ಕೇಂದ್ರ ಸಚಿವ…
ನವದೆಹಲಿ: ನೀವು ಖರೀದಿಸುವ ಬಾಟಲಿ ನೀರಿನ ಗುಣಮಟ್ಟ ಹೇಗಿದೆ? ಬಿಸ್ಲೆರಿ ನೀರಿನ ವಿವಾದದ ಬೆನ್ನಲ್ಲೇ, ವಿವಿಧ ಬ್ರ್ಯಾಂಡ್‌ಗಳ ಪ್ಯಾಕೇಜ್ಡ್ ಕುಡಿಯುವ…
ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ಏಳನೇ ದಿನಕ್ಕೆ ಕಾಲಿಟ್ಟಿದೆ.…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದಲ್ಲಿ ಗಂಡಾನೆಯ ಕಳೇಬರ ಪತ್ತೆಯಾಗಿದೆ. ಕುಂದುಕೆರೆ ಗಸ್ತಿನ ಬೂದಿಕಟ್ಟೆ ಅರಣ್ಯ ಪ್ರದೇಶದಲ್ಲಿ…