ಓದುಗರ ಪತ್ರ
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜ ರಾಪು ರಾಮಮೋಹನ್ ನಾಯ್ಡು ಅವರಿಗೆ ಮನವಿ ಮಾಡಿರುವುದು ಸ್ವಾಗತಾರ್ಹ. ಹಾಗೆಯೇ ಮೈಸೂರಿಗೆ ಉತ್ತಮ ವಾಯು ಸಂಪರ್ಕ ಕಲ್ಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದಿರುವುದು ಖುಷಿಯ ವಿಷಯ.
ರಾಜ್ಯ ಸರ್ಕಾರದಿಂದ ಅಗತ್ಯ ಭೂಮಿ ಹಸ್ತಾಂತರವಾದ ಬಳಿಕ ಮೈಸೂರು ವಿಮಾನ ನಿಲ್ದಾಣದ ವಿಸ್ತರಣಾ ಪ್ರಕ್ರಿಯೆ ಆರಂಭಿಸಿ ಅಭಿವೃದ್ಧಿಪಡಿಸಲಾಗುವುದರ ಜೊತೆಗೆ ನ್ಯಾರೊ ಬಾಡಿ (ಕಡಿಮೆ ಹಾಗೂ ದೂರದ ದೇಶೀಯ ಅಥವಾ ಅಂತರರಾಷ್ಟ್ರೀಯ ಪ್ರಯಾಣಕ್ಕೆ ಬಳಸುವ) ವಿಮಾನಗಳಿಗೆ ಆದ್ಯತೆ ಕಲ್ಪಿಸುವಂತೆ ಯದುವೀರ್ ಅವರು ಮನವಿ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ನಾಗರಿಕ ವಿಮಾನಯಾನ ಸಚಿವಾಲಯವು ಆಯೋಜಿಸಿದ್ದ ಸಮಾಲೋಚನಾ ಸಮಿತಿ ಸಭೆಯ ನಂತರ ಕೇಂದ್ರ ಸಚಿವರು ಹೇಳಿದ್ದು, ಆದಷ್ಟು ಬೇಗ ಅದು ಕಾರ್ಯರೂಪಕ್ಕೆ ಬರುವಂತಾಗಲಿ.
– ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…