ಓದುಗರ ಪತ್ರ
ಮಂಡ್ಯ ಜಿಲ್ಲೆಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆಯನ್ನು ವೀಕ್ಷಿಸಲು ದೇಶದ ವಿವಿಧೆಡೆಗಳಿಂದ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ರಾಜ್ಯ ಸರ್ಕಾರ ಇತ್ತೀಚೆಗೆ ಕೆಆರ್‌ಎಸ್ ಪ್ರವೇಶ ದರವನ್ನು ಹೆಚ್ಚಳ ಮಾಡಿರುವುದು ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ. ಈ ಹಿಂದೆ ನಾಲ್ಕು ಚಕ್ರ ವಾಹನಗಳಿಗೆ ನೂರು ರೂ. ಪಾರ್ಕಿಂಗ್ ಶುಲ್ಕ ಇದ್ದಿದ್ದನ್ನು ೨೦೦ ರೂ.ಗೆ ಹೆಚ್ಚಳ ಮಾಡಲಾಗಿದೆ. ಅಷ್ಟೇ ಅಲ್ಲದೇ ಟೋಲ್‌ನಲ್ಲಿ ೧೦೦ ರೂ. ಶುಲ್ಕವನ್ನು ಪಡೆಯಲಾಗುತ್ತಿದೆ. ೫೦ ರೂ. ಇದ್ದ ಪ್ರವೇಶದರವನ್ನು ೧೦೦ ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ಕೆಆರ್‌ಎಸ್ ಸದ್ಯ ದೀಪಗಳ ಅಲಂಕಾರವಿಲ್ಲದೆ ಕಳೆಗುಂದಿದ್ದು, ಇಲ್ಲಿಗೆ ಬರುವ ಪ್ರವಾಸಿಗರು ದುಬಾರಿ ಹಣ ತೆತ್ತು ಬೇಸರದಿಂದ ವಾಪಸಾಗುತ್ತಿದ್ದಾರೆ.
ಸಂಬಂಧಪಟ್ಟವರು ಈಗಲಾದರೂ ಪ್ರವೇಶದರ ಹಾಗೂ ವಾಹನ ಪಾರ್ಕಿಂಗ್ ಶುಲ್ಕವನ್ನು ಕೂಡಲೇ ಕಡಿಮೆ ಮಾಡುವುದರೊಂದಿಗೆ ಕೆಆರ್ ಎಸ್‌ನಲ್ಲಿ ಈ ಮೊದಲಿನಂತೆಯೇ ವಿದ್ಯುತ್ ದೀಪಾಲಂಕಾರ, ಮೊದಲಾದ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಸಿದ್ದಲಿಂಗೆಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾ.
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…