ಓದುಗರ ಪತ್ರ
ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದರಿಂದಾಗಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಸಿಎನ್‌ಜಿ, ಆಟೋ ಎಲ್‌ಪಿಜಿ ಗ್ಯಾಸ್ ದರಗಳನ್ನು ಮೂರು ಬಾರಿ ಏರಿಕೆ ಮಾಡಿದೆ.
ಪೆಟ್ರೋಲ್ ಮೇಲೆ ರಾಜ್ಯದಲ್ಲಿ ೨೯.೮೪ ರೂ. ಡೀಸೆಲ್ ಮೇಲೆ ೨೧.೧೭ ರೂ. ಗೃಹ ಬಳಕೆ ಅಡುಗೆ ಅನಿಲದ ಮೇಲೆ ಪ್ರತಿ ಸಿಲಿಂಡರ್‌ಗೆ ೪೩.೩೬ ರೂ. ಜಿಎಸ್‌ಟಿ ವಿಧಿಸುತ್ತಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ತೆರಿಗೆಯೂ ಸೇರಿರುವುದರಿಂದ ಪೆಟ್ರೋಲ್ ಬೆಲೆ ಲೀಟರ್‌ಗೆ ೧೧೧ರೂ., ಡೀಸೆಲ್ ೧೦೦ ರೂ. ಗಳಾಗಿದೆ. ಅಡುಗೆ ಅನಿಲದ ಸಿಲಿಂಡರ್ ಬೆಲೆ ೯೫೦ ರೂ. ಆಗಿದ್ದು, ಸರಕು ಸಾಗಣೆ ದರ ಹೆಚ್ಚಾಗಿರುವುದರಿಂದ ಬಡ ಮತ್ತು ಮಧ್ಯಮ ವರ್ಗದವರು ಜೀವನ ನಡೆಸುವುದೇ ದುಸ್ತರವಾಗಿದೆ.
ಇಂಧನ ಬೆಲೆ ಏರಿಕೆಯ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಸ್ಪರ ಆರೋಪ ಹಾಗೂ ಪ್ರತ್ಯಾರೋಪ ಮಾಡುತ್ತಿವೆಯೇ ಹೊರತು ಇಂಧನದ ಮೇಲಿನ ತೆರಿಯನ್ನು ಕಡಿತಗೊಳಿಸುವ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಈಗಲಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ತೆರಿಗೆಯನ್ನು ಕಡಿತ ಮಾಡಿ ಪ್ರಜೆಗಳ ಹಿತ ಕಾಪಾಡುವುದು ಅಗತ್ಯ.
– ಗುರು, ಕಾರ್ಯ, ನಂಜನಗೂಡು ತಾ.
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…
ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…
ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…
ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ ಸಾರ್... ಎಲ್ಲ…
ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…