Mysore
21
mist

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಓದುಗರ ಪತ್ರ: ವಿಮೆ ಮೇಲಿನ ತೆರಿಗೆ ಕಡಿಮೆ ಮಾಡಿ

ಕಳೆದ ಒಂದು ವರ್ಷದಿಂದಲೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ವಿಮೆ ಮತ್ತು ಜೀವ ವಿಮೆಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಾಗಿ ಹೇಳುತ್ತಿದ್ದಾರೆಯೇ ವಿನಾ ಈವರೆಗೂ ಕಡಿಮೆ ಮಾಡಿಲ್ಲ.

2024ರ ಡಿಸೆಂಬರ್‌ನಲ್ಲಿ ನಿರ್ಮಲಾ ಸೀತಾರಾಮನ್‌ರವರ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್‌ಟಿ ಆಡಳಿತ ಮಂಡಳಿ ಸಭೆಯಲ್ಲಿ ಮುಂದಿನ ಹಣಕಾಸು ವರ್ಷದಲ್ಲಿ ಆರೋಗ್ಯ ವಿಮೆ ಮತ್ತು ಜೀವ ವಿಮೆ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದರು. ವಿಮೆಗಳ ಮೇಲಿನ ಜಿಎಸ್‌ಟಿ ಕಡಿಮೆ ಮಾಡುವ ಸಲುವಾಗಿ ನೇಮಕ ಮಾಡಿದ್ದ ಸಮಿತಿಯೂ ಇವುಗಳ ಮೇಲಿನ ಶೇ. 18ರಷ್ಟು ಜಿಎಸ್‌ಟಿಯನ್ನು ಕಡಿತಗೊಳಿಸುವಂತೆ ಶಿಫಾರಸು ಮಾಡಿದ್ದರೂ ಅದನ್ನು ಗಣನೆಗೆ ತೆಗೆದುಕೊಳ್ಳದೆ ಮುಂದೂಡಿರುವುದು ಸರಿಯಲ್ಲ.

ಕೇಂದ್ರ ಸರ್ಕಾರದ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ಸಚಿವರು, ಈ ಎರಡೂ ವಿಮೆಗಳ ಮೇಲಿನ ಜಿಎಸ್‌ಟಿ ತೆರಿಗೆಯನ್ನು ಕಡಿಮೆ ಮಾಡುವಂತೆ ಸೂಚಿಸುತ್ತಿದ್ದಾರೆ. ಅಲ್ಲದೆ ಅಽಕ ಜಿಎಸ್‌ಟಿಯಿಂದಾಗಿ ಮಧ್ಯಮ ವರ್ಗದ ಜನರು ಆರೋಗ್ಯ ವಿಮೆಗಳಿಂದ ದೂರು ಉಳಿಯುವಂತಾಗಿದೆ. ಆದ್ದರಿಂದ ವಿತ್ತ ಸಚಿವರು ಈ ಬಾರಿ ಯಾದರೂ ಜಿಎಸ್‌ಟಿ ಮಂಡಳಿಯೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

Tags:
error: Content is protected !!