ಕಳೆದ ಒಂದು ವರ್ಷದಿಂದಲೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ವಿಮೆ ಮತ್ತು ಜೀವ ವಿಮೆಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಾಗಿ ಹೇಳುತ್ತಿದ್ದಾರೆಯೇ ವಿನಾ ಈವರೆಗೂ ಕಡಿಮೆ ಮಾಡಿಲ್ಲ.
2024ರ ಡಿಸೆಂಬರ್‌ನಲ್ಲಿ ನಿರ್ಮಲಾ ಸೀತಾರಾಮನ್‌ರವರ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್‌ಟಿ ಆಡಳಿತ ಮಂಡಳಿ ಸಭೆಯಲ್ಲಿ ಮುಂದಿನ ಹಣಕಾಸು ವರ್ಷದಲ್ಲಿ ಆರೋಗ್ಯ ವಿಮೆ ಮತ್ತು ಜೀವ ವಿಮೆ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದರು. ವಿಮೆಗಳ ಮೇಲಿನ ಜಿಎಸ್‌ಟಿ ಕಡಿಮೆ ಮಾಡುವ ಸಲುವಾಗಿ ನೇಮಕ ಮಾಡಿದ್ದ ಸಮಿತಿಯೂ ಇವುಗಳ ಮೇಲಿನ ಶೇ. 18ರಷ್ಟು ಜಿಎಸ್‌ಟಿಯನ್ನು ಕಡಿತಗೊಳಿಸುವಂತೆ ಶಿಫಾರಸು ಮಾಡಿದ್ದರೂ ಅದನ್ನು ಗಣನೆಗೆ ತೆಗೆದುಕೊಳ್ಳದೆ ಮುಂದೂಡಿರುವುದು ಸರಿಯಲ್ಲ.
ಕೇಂದ್ರ ಸರ್ಕಾರದ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ಸಚಿವರು, ಈ ಎರಡೂ ವಿಮೆಗಳ ಮೇಲಿನ ಜಿಎಸ್‌ಟಿ ತೆರಿಗೆಯನ್ನು ಕಡಿಮೆ ಮಾಡುವಂತೆ ಸೂಚಿಸುತ್ತಿದ್ದಾರೆ. ಅಲ್ಲದೆ ಅಽಕ ಜಿಎಸ್‌ಟಿಯಿಂದಾಗಿ ಮಧ್ಯಮ ವರ್ಗದ ಜನರು ಆರೋಗ್ಯ ವಿಮೆಗಳಿಂದ ದೂರು ಉಳಿಯುವಂತಾಗಿದೆ. ಆದ್ದರಿಂದ ವಿತ್ತ ಸಚಿವರು ಈ ಬಾರಿ ಯಾದರೂ ಜಿಎಸ್‌ಟಿ ಮಂಡಳಿಯೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…