Andolana originals

ಓದುಗರ ಪತ್ರ: ಗೋಲ್ಡ್ ಪಾಸ್ ಕೊಂಡವರಿಗೆ ಹಣ ಹಿಂದಿರುಗಿಸಿ

೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ದಸರಾ ಸಮಿತಿ ಪರಿಚಯಿಸಿದ್ದ ಗೋಲ್ಡ್ ಪಾಸ್ ಅನ್ನು ೬,೫೦೦ರೂ. ಕೊಟ್ಟು ಖರೀದಿಸಿದ ಹಲವು ಮಂದಿಗೆ ತೀರ ನಿರಾಸೆ ಉಂಟಾಗಿದೆ. ಹಣ ತೆತ್ತು ಗೋಲ್ಡ್ ಪಾಸ್ ಖರೀದಿಸಿದವರಿಗೆ ನಿಗದಿಪಡಿಸಿದ ಸ್ಥಳದಲ್ಲಿ ಜಂಬೂಸವಾರಿ ವೀಕ್ಷಿಸಲು ಪೊಲೀಸರು ಅನುಮತಿ ನೀಡದೆ ಮಧ್ಯಾಹ್ನ ೧೨ ಗಂಟೆಗೇ ಅರಮನೆ ಪ್ರವೇಶಿಸುವ ಎಲ್ಲ ಗೇಟ್‌ಗಳನ್ನು ಬಂದ್ ಮಾಡಿದ್ದರು. ದೊಡ್ಡಗಡಿಯಾರ, ಕೆ.ಆರ್. ವೃತ್ತ ಸೇರಿದಂತೆ ಇತರ ಸ್ಥಳಗಳಲ್ಲಿ ರಸ್ತೆಯ ಬದಿಯಲ್ಲಿ ನಿಂತು ಜಂಬೂ ಸವಾರಿ ನೋಡಿ ಎಂದು ಪುಕ್ಕಟೆ ಸಲಹೆಯನ್ನು ಬೇರೆ ನೀಡುತ್ತಿದ್ದರು. ಇದು ನ್ಯಾಯವೇ? ಮಾಧ್ಯಮಗಳ ಮುಂದೆ ಪೊಲೀಸ್ ಆಯುಕ್ತರು ದಸರಾ ವೀಕ್ಷಣೆಗೆ ಬರುವವರಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದರು. ಇವರ ಮಾತನ್ನು ನಂಬಿ ಪಾಸ್ ಪಡೆದ ಅನೇಕ ಮಂದಿಗೆ ಪ್ರವೇಶ ನಿರಾಕರಿಸಿದ್ದು ಖಂಡನೀಯ. ಬಹುತೇಕ ಜನರು ನಿರಾಸೆಯೊಂದಿಗೆ ದಸರಾ ನೋಡಲು ಹರಸಾಹಸಪಟ್ಟರೆ, ಮತ್ತೆ ಕೆಲವರು ಜಂಬೂ ಸವಾರಿ ಮೆರವಣಿಗೆಯನ್ನೇ ನೋಡದೆ ಮನೆಯತ್ತ ಹೊರಟರು. ದಸರಾ ಅಚ್ಚುಕಟ್ಟಾಗಿ ನಡೆಯಲು ಕರ್ತವ್ಯ ನಿರ್ವಹಿಸಿದ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತರು ಗೋಲ್ಡ್ ಪಾಸ್ ಪಡೆದು ದಸರಾ ವೀಕ್ಷಣೆ ಮಾಡಲು ಅವಕಾಶ ಸಿಗದಿರುವವರನ್ನು ಗುರುತಿಸಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸರ್ಕಾರದೊಡನೆ ಚರ್ಚಿಸಿ ಹಣ ಹಿಂದಿರುಗಿಸಲು ಕ್ರಮ ಕೈಗೊಳ್ಳಬೇಕು.

– ನಾಗೇಶ್ ,ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

3 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

5 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

6 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

6 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

6 hours ago