ಓದುಗರ ಪತ್ರ
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.
ಬಸ್‌ನಿಂದ ಪ್ರಯಾಣಿಕರು ಇಳಿದು ಹೊರ ಬರುತ್ತಿದ್ದಂತೆ ಆಟೋ ಚಾಲಕರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸುತ್ತಾರೆ. ಅಲ್ಲದೇ ಊರಿಗೆ ಹೊಸಬರು ಎಂದು ತಿಳಿದರಂತೂ ಕನಿಷ್ಠ ದೂರಕ್ಕೂ ದುಬಾರಿ ಹಣ ವಸೂಲಿ ಮಾಡುತ್ತಾರೆ. ಸಂಚಾರ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಬಸ್ ನಿಲ್ದಾಣದ ಬಳಿ ಅಡ್ಡಾದಿಡ್ಡಿಯಾಗಿ ಆಟೋ ನಿಲ್ಲಿಸುವ ಹಾಗೂ ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡುವ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವುದು ಅಗತ್ಯ.
-ಎಚ್.ಆರ್.ಉದಯ ಕುಮಾರ್, ಪ್ರಥಮ ಎಂ.ಎ.ಪತ್ರಿಕೋದ್ಯಮ, ಮೈಸೂರು ವಿವಿ
ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…