Andolana originals

ಓದುಗರ ಪತ್ರ:  ‘ರಾಮ ಜಪ’ ಮಸೂದೆ ತಿರಸ್ಕರಿಸಿ

ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ. ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಯಲ್ಲಿ ಗಾಂಧಿಯ ಹೆಸರನ್ನು ಕೈ ಬಿಟ್ಟು ‘ಜಿ ರಾಮ್ ಜಿ’ ಎಂಬ ಹೊಸ ನಾಮಕರಣದೊಂದಿಗೆ ಮಸೂದೆ ಲೋಕಸಭೆಯಲ್ಲಿ ಮಂಡಿಸಿರುವುದು ಖಂಡನೀಯ. ಗಾಂಧೀಜಿ ಜಾಗದಲ್ಲಿ ರಾಮನ ಜಪತಪ ಶುರುವಾಗಿರುವುದು ವಿಷಾದನೀಯ.

ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ತಿರಸ್ಕರಿಸಬೇಕು. ಇದು ಹೀಗೆಯೇ ಮುಂದುವರಿದರೆ ಮುಂದೊಂದು ದಿನ ಗಾಂಧಿ ಭವನಗಳು ಶ್ರೀರಾಮ ಭವನ ಆದರೆ ಆಶ್ಚರ್ಯ ಇಲ್ಲ. ದೇಶದ ಜಾತ್ಯತೀತ ಮನಸ್ಸುಗಳು ಪಕ್ಷಾತೀತವಾಗಿ ದನಿ ಎತ್ತದಿದ್ದರೆ ಗಾಂಧಿ ತತ್ವ, ಚಿಂತನೆಗಳಿಗೆ, ಶಾಂತಿ ಸಂದೇಶಗಳಿಗೆ ಇತಿಶ್ರೀ ಹಾಡುವ ಕಾಲ ದೂರವಿಲ್ಲ. ವಿದೇಶಿ ಗಣ್ಯರು ದಿಲ್ಲಿಗೆ ಬಂದಾಗ ಗಾಂಧಿ ಸ್ಮಾರಕಕ್ಕೆ ಭೇಟಿ ಕೊಡುವುದನ್ನೂ ನಿಷೇಽಸುವ ಕಾಲ ಬಂದರೂ ಬರಬಹುದು. ಬಹುತ್ವದ ಭಾರತ, ಹಲವು ಸಂಸ್ಕ ತಿ, ಹಲವು ಬಣ್ಣಗಳ ಭಾರತ ಬದಲಾಗದಿರಲಿ. ನಮ್ಮ ಒಗ್ಗಟ್ಟಿನ ಪ್ರತಿಭಟನೆಗಳು ದೇಶಾದ್ಯಂತ ಮೊಳಗಲಿ.

-ಆರ್.ಜಿ. ಹಳ್ಳಿ ನಾಗರಾಜ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

1 hour ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

1 hour ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

1 hour ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

1 hour ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

1 hour ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago