Andolana originals

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ ಪ್ರತಿವರ್ಷ ಸಾವಿರಾರು ಎಕರೆ ಫಲವತ್ತಾದ ಭೂಮಿ ನಾಶವಾಗುತ್ತಿರುವುದು ಆತಂಕಕಾರಿ. ಇದಕ್ಕೆ ಪರಿಹಾರವಾಗಿ ಕೃಷಿ ಭೂಮಿ ಬ್ಯಾಂಕಿಂಗ್ ಮತ್ತು ಸಾವಯವ ಒಕ್ಕೂಟದಂತಹ ನೂತನ ಪರಿಕಲ್ಪನೆಗಳನ್ನು ಜರಿಗೆ ತರಬೇಕು. ಧಾರ್ಮಿಕ ಸಂಸ್ಥೆಗಳು ತಮ್ಮ ಮಠದ ಜಮೀನುಗಳಲ್ಲಿ ಮಾದರಿ ಸಾವಯವ ತಂತ್ರeನ ಕೇಂದ್ರಗಳನ್ನು ಸ್ಥಾಪಿಸಿ ಶೇ.೧೦೦ರಷ್ಟು ನೈಸರ್ಗಿಕ ಕೃಷಿಗೆ ಪ್ರೇರಣೆ ನೀಡಬಹುದು. ಕೃಷಿ ಭೂಮಿಯನ್ನು ರಸ್ತೆ ಅಥವಾ ಯೋಜನೆಗಳಿಗೆ ವಶಪಡಿಸಿಕೊಳ್ಳುವ ಮುನ್ನ ಪರಿಸರ-ಸಾಮಾಜಿಕ ಆಡಿಟ್ ಕಡ್ಡಾಯವಾಗಬೇಕು.  ಧಾರ್ಮಿಕ ಮುಖಂಡರು ಮತ್ತು ಸಾಮಾಜಿಕ ಹೋರಾಟಗಾರರು ರೈತರ ಬೆನ್ನಿಗೆ ನಿಂತಾಗ ಮಾತ್ರ ರಾಜ್ಯದ ಆಹಾರ ಭದ್ರತೆ ಮತ್ತು ಪರಿಸರ ಉಳಿಯಲು ಸಾಧ್ಯ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

 

ಆಂದೋಲನ ಡೆಸ್ಕ್

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

2 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

2 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

2 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

2 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

2 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

3 hours ago