ದೇಶದಲ್ಲಿ ನೀಟ್ ಸೇರಿದಂತೆ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಂಚನೆಯನ್ನು ತಡೆಯಲು, ಪರೀಕ್ಷೆ ದಿನದಂದೇ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಬೇಕು ಹಾಗೂ ಕಂಪ್ಯೂಟರ್ ಬೇಸ್ಡ್ ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾ ಸುಧಾರಣೆಗಳ ಉನ್ನತ ಮಟ್ಟದ ಕಾರ್ಯಪಡೆಯ ಮುಖ್ಯಸ್ಥ ನಂದನ್ ನಿಲೇಕಣಿ ಅವರು ಸಲಹೆ ನೀಡಿದ್ದಾರೆ. ಇದು ಪ್ರಶ್ನೆ ಪತ್ರಿಕೆ ಸೋರಿಕೆಗೆ ಪರಿಹಾರವಲ್ಲ. ಎಐ ವ್ಯವಸ್ಥೆಗಳು ಗಣಿತದ ಮತ್ತು ಸಾಂಖ್ಯಿಕ ಪರಿಕರಗಳಾಗಿವೆಯೇ ಹೊರತು, ಅವು ನೈತಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವಿರುವ ಪ್ರಜ್ಞಾಪೂರ್ವಕ ಪ್ರತಿನಿಧಿಯಲ್ಲ. ದೇಶದಲ್ಲಿ ಸದ್ಯ, ಸುಮಾರು ೧.೫ ಲಕ್ಷ ಕಂಪ್ಯೂಟರ್ ಪರೀಕ್ಷಾ ಕೇಂದ್ರಗಳ ಲಭ್ಯತೆಯಿದ್ದು, ಇಡೀ ದೇಶದ ಕೋಟ್ಯಂತರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಈ ಜಾಲವನ್ನು ಭಾರಿ ಪ್ರಮಾಣದಲ್ಲಿ ವಿಸ್ತರಿಸಬೇಕಾಗಿದೆ. ಇದಕ್ಕೆ ಸರ್ಕಾರಕ್ಕೆ ಮಿಲಿಯನ್ ಗಟ್ಟಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತದೆ. ತಾಂತ್ರಿಕತೆಯ ಬಗ್ಗೆ ಅಷ್ಟಾಗಿ ಅರಿವು ಇರದ ಗ್ರಾಮೀಣ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ತಾಂತ್ರಿಕ ದೋಷಗಳು ಎದುರಾದರೆ ಯಾರು ಹೊಣೆ ಎಂಬ ಪ್ರಶ್ನೆ ಕಾಡುತ್ತದೆ.
ನಂದನ್ ನಿಲೇಕಣಿ ಅವರ ಈ ತಂತ್ರಜ್ಞಾನ ಆಧಾರಿತ ನಿಯಮವು ಭ್ರಷ್ಟಾಚಾರ ಮತ್ತು ಪೇಪರ್ ಸೋರಿಕೆಯನ್ನು ತಡೆಯಲು ಮೇಲುನೋಟಕ್ಕೆ ಕೆಲವೊಂದು ವಿಭಿನ್ನ ಅಂಶಗಳು ಸರಿ ಅನ್ನಿಸಿದರೂ ಆದರೆ, ಇದನ್ನು ಯಶಸ್ವಿಯಾಗಿ ಜಾರಿಗೆ ತರಬೇಕಾದರೆ ದೇಶದಾದ್ಯಂತ ಸುರಕ್ಷಿತವಾದ ಸೈಬರ್ ಭದ್ರತೆ ಮತ್ತು ಬಲಿಷ್ಠ ಮೂಲಸೌಕರ್ಯವನ್ನು ಅಭಿವೃದ್ಧಿ ಪಡಿಸುವುದು ಅತ್ಯಗತ್ಯವಾಗಿದೆ. ಸರ್ವ ಸಮಸ್ಯೆಗಳಿಗೂ ಕೃತಕ ಬುದ್ಧಿಮತ್ತೆಯೇ ಪರಿಹಾರವಲ್ಲ.
-ಅನಿಲ್ ಕುಮಾರ್, ನಂಜನಗೂಡು
ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…
ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…
ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…
ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಷ್ಯಾ-ಭಾರತ ಸಂಬಂಧದ ಹಿನ್ನೆಲೆಯಲ್ಲಿ ಚಿತ್ರೋತ್ಸವ ಆಯೋಜನೆ ಎರಡು ಕನ್ನಡ ಚಿತ್ರಗಳು ಅಂತಾರಾಷ್ಟ್ರೀಯ…