ಮೈಸೂರಿನ ಕುವೆಂಪು ನಗರದ ಕಾಂಪ್ಲೆಕ್ಸ್ ಮುಖ್ಯ ರಸ್ತೆಯ (ಕೆಎಸ್ ಆರ್‌ಟಿಸಿ ಡಿಪೋ ರಸ್ತೆ) ಮೂರು ಕಡೆಗಳಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಾಣ ಮಾಡುತ್ತಿರುವವರು ಮುಖ್ಯ ರಸ್ತೆಗೆ ಹೊಂದಿಕೊಂಡಂತೆಯೇ ಸುಮಾರು ೧೦ ಅಡಿಗಳ ಅಂತರದಲ್ಲಿ ವಾಚ್‌ಮ್ಯಾನ್ ಶೆಡ್ಡುಗಳನ್ನು ಕಟ್ಟಿಕೊಂಡಿದ್ದು, ಇದರಿಂದಾಗಿ ಪಾದಚಾರಿಗಳಿಗೆ ಕಿರಿಕಿರಿಯಾಗುವ ಜತೆಗೆ ವಾಹನಗಳ ಸಂಚಾರಕ್ಕೂ ಅಡಚಣೆಯಾಗುತ್ತಿದೆ.
ಈ ಮುಖ್ಯ ರಸ್ತೆಯು ಕೆಎಸ್‌ಆರ್‌ಟಿಸಿ ಬಸ್ ಡಿಪೋಗೂ ಸಂಪರ್ಕ ಕಲ್ಪಿಸುವುದರಿಂದ ಇಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಅಲ್ಲದೆ ವಾಣಿಜ್ಯ ಕಾಂಪ್ಲೆಕ್ಸ್‌ಗಳು ಇರುವುದರಿಂದ ಸದಾ ಜನನಿಬಿಡ ಪ್ರದೇಶವಾಗಿರುತ್ತದೆ. ಇಂತಹ ರಸ್ತೆಯಲ್ಲಿ ಫುಟ್‌ಪಾತ್‌ಅನ್ನು ಆಕ್ರಮಿಸಿಕೊಳ್ಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇನ್ನು ಈ ರಸ್ತೆಯಲ್ಲಿ ಮಹಾನಗರ ಪಾಲಿಕೆಯ ಕೆಲ ಅಽಕಾರಿಗಳು ನಿತ್ಯ ಓಡಾಡುತ್ತಿದ್ದರೂ ಈ ಖಾಸಗಿ ಕಟ್ಟಡಗಳ ಶೆಡ್ಡುಗಳನ್ನು ಕಂಡೂ ಕಾಣದಂತಿರುವುದು ಆಶ್ಚರ್ಯಕರ. ಪಾಲಿಕೆಯವರು ಈಗಲಾದರೂ ಇತ್ತ ಗಮನಹರಿಸಿ ಈ ಶೆಡ್ಡುಗಳನ್ನು ತೆರವುಗೊಳಿಸಬೇಕಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ…
ಬೆಂಗಳೂರು: ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ…
ಮಂಡ್ಯ: 2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್ ಶಾಸಕ ಗಣಿಗ…
ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ…
ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ…
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…